ಕಲಬುರ್ಗಿ: ಮಧ್ಯಪ್ರದೇಶದಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ ಎಂಟು ಒಂಟೆಗಳನ್ನು ಸೋಮವಾರ ಆಳಂದ ತಹಶೀಲ್ದಾರ್ ಹಾಗೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಒಟ್ಟಾರೆ 25ಕ್ಕೂ ಅಧಿಕ ಒಂಟೆಗಳನ್ನು ಮಧ್ಯಪ್ರದೇಶದಿಂದ ಕಾಲ್ನಡಿಗೆಯಲ್ಲಿ ಕರೆತರಲಾಗಿದ್ದು, ಅವುಗಳನ್ನು ಮಾಂಸಾಹಾರಕ್ಕಾಗಿ ಬೆಂಗಳೂರಿಗೆ ಕರೆದೊಯ್ಯಲಾಗುತ್ತಿತ್ತು ಎಂದು ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯ ಹುಣಚಿರಾಯ ಮೋಟಗಿ ಹಾಗೂ ಸುನಿಲ್ ದುಗರ್ ತಿಳಿಸಿದ್ದಾರೆ.

ಉಳಿದ ಒಂಟೆಗಳಿಗಾಗಿ ಶೋಧ ಕಾರ್ಯ ನಡೆದಿದೆ. ಮೇಲಿಂದ ಮೇಲೆ ಮಾಂಸಕ್ಕಾಗಿ ಒಂಟೆಗಳನ್ನು ಕಳ್ಳ ಸಾಗಾಣಿಕೆ ಮಾಡಲಾಗುತ್ತಿದ್ದು, ಪೊಲೀಸ್ ಅಧಿಕಾರಿಗಳು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಒಂಟೆಗಳನ್ನು ವಶಕ್ಕೆ ಪಡೆದ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.