ಕಲಬುರಗಿ: ಕಲ್ಯಾಣ ಕರ್ನಾಟಕದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ನಗರಕ್ಕೆ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಕೆಕೆಆರ್ ಡಿಬಿಯಿಂದ ಕೈಗೆತ್ತಿಕೊಳ್ಳಲಾದ ₹ 145 ಕೋಟಿ ಮೊತ್ತದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು.

₹ 60.05 ಕೋಟಿ ಮೊತ್ತದ ಕಾಮಗಾರಿಗಳನ್ನು ಲೋಕಾರ್ಪಣೆ ಮಾಡಿದರು.

ಲೋಕೋಪಯೋಗಿ ಇಲಾಖೆಯ ₹ 139.36 ಕೋಟಿ ವೆಚ್ಚದ 33 ಕಾಮಗಾರಿಗಳಿಗೆ ಅಡಿಗಲ್ಲು ಹಾಗೂ ಒಟ್ಟು ₹ 50.81 ಕೋಟಿ ವೆಚ್ಚದ 38 ಕಾಮಗಾರಿಗಳನ್ನು ಉದ್ಘಾಟಿಸಿದರು.

ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ₹ 6.15 ಕೋಟಿ ವೆಚ್ಚದ 41 ಕಾಮಗಾರಿಗಳಿಗೆ ಅಡಿಗಲ್ಲು ಹಾಗೂ ಒಟ್ಟು ₹ 74 ಲಕ್ಷ ರೂ ವೆಚ್ಚದ 2 ಕಾಮಗಾರಿಗಳನ್ನು ಉದ್ಘಾಟಿಸಿದರು.

ಕೆಆರ್ ಐಡಿಎಲ್ ನ ₹ 5.03 ಕೋಟಿ ರೂ ವೆಚ್ಚದ 12 ಕಾಮಗಾರಿಗಳಿಗೆ ಚಾಲನೆ ನೀಡಿದರು.

ನಿರ್ಮಿತಿ ಕೇಂದ್ರ ನಿರ್ಮಿಸಿದ ₹ 4.47 ಕೋಟಿ ವೆಚ್ಚದ 26 ಅಂಗನವಾಡಿ ಕಟ್ಟಡಗಳನ್ನು ಉದ್ಘಾಟಿಸಿದರು.

ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲ್ಲೂಕಿನ ರಾವೂರ ಗ್ರಾಮದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸಿಬ್ಬಂದಿಗಳ ವಸತಿ ಗೃಹ ಹಾಗೂ ಅಗತ್ಯ ಮೂಲಭೂತಸೌಕರ್ಯಗಳ ಕಾಮಗಾರಿಗೆ ಚಾಲನೆ ನೀಡಿದರು.

ಕಲಬುರಗಿ ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡ ಜಿಲ್ಲಾ ಕೈಗಾರಿಕಾ ಕೇಂದ್ರ ಕಾರ್ಯಲಯದ ಕಟ್ಟಡವನ್ನು ಉದ್ಘಾಟಿಸಿದರು.

ಆಳಂದ ತಾಲ್ಲೂಕಿನ ಖಜೂರಿ ಗ್ರಾಮದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಚಾಲನೆ ನೀಡಿದರು.

ತಾಲ್ಲೂಕಿನ ಖಜೂರಿ ಗ್ರಾಮದಲ್ಲಿ ₹ 18 ಕೋಟಿ ವೆಚ್ಚದಲ್ಲಿ ಇಂದಿರಾ ಗಾಂಧಿ ವಸತಿ ಶಾಲೆ ನಿರ್ಮಾಣಕ್ಕೆ ಚಾಲನೆ ನೀಡಿದರು.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಖರೀದಿಸಿದ ಎಸಿ ಹಾಗೂ ನಾನ್ ಎಸಿ ಸ್ಲೀಪರ್ ಬಸ್ ಗಳನ್ನು ಸಾರ್ವಜನಿಕ ಸೇವೆಗೆ ಅರ್ಪಿಸಿದರು.

ಇದೇ ಸಂದರ್ಭದಲ್ಲಿ ಶಕ್ತಿ ಯೋಜನೆಯಡಿ ಮಹಿಳೆ ಆಧಾರ್ ಕಾರ್ಡ್ ತೋರಿಸಿ ಉಚಿತ ಟಿಕೆಟ್ ಪಡೆಯುವ ಟ್ಯಾಬ್ಲೊ ಗಮನ ಸೆಳೆಯಿತು.

ಎಕ್ಸ್ ಪ್ರೆಸ್ ಬಸ್ ಗಳಿಗೆ ಕಲಬುರಗಿ ಜಿಲ್ಲೆ ಮಳಖೇಡದ ರಾಷ್ಟ್ರಕೂಟರ ರಾಜನಾಗಿದ್ದ ಅಮೋಘವರ್ಷ ನೃಪತುಂಗನ ಹೆಸರನ್ನು ಇಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.