ಕಲಬುರ್ಗಿ: ‘ಸಾಧನೆ ಮಾಡುವವರಿಗೆ ವಯಸ್ಸು, ರೂಪ, ಬಣ್ಣ ಇವುಗಳು ಯಾವವು ಮುಖ್ಯವಾಗುವುದಿಲ್ಲ. ಬದಲಾಗಿ ಅವರಲ್ಲಿರುವ ಉತ್ಸಾಹ, ಸಾಧನೆ ಮಾಡುವಂತಹ ಛಲವೊಂದಿದ್ದರೆ ಸಾಕು. ಅದಕ್ಕೆ ಯಾವುದು ಅಡ್ಡಿ ಬರುವುದಿಲ್ಲ ಎಂದು ಅಕ್ಕ ಐಎಎಸ್ ಅಕಾಡೆಮಿ ನಿರ್ದೇಶಕ ಡಾ.ಶಿವಕುಮಾರ್ ಹೇಳಿದರು.

ನಗರದ ಕನ್ನಡ ಸುವರ್ಣ ಭವನದಲ್ಲಿ ದತ್ತಾತ್ರೇಯ ಎಜುಕೇಶನ್ ಚಾರಿಟಬಲ್ ಟ್ರಸ್ಟ್ ಆಯೋಜಿಸಿದ್ದ ನಿಮ್ಮ ಯಶಸ್ಸು ಸ್ಪರ್ಧಾತ್ಮಕ ತರಬೇತಿ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಗ್ರಾಮೀಣ ಭಾಗದಲ್ಲಿ ಇಂದಿನ ದಿನಗಳಲ್ಲಿ ಹೆಚ್ಚಿನ ಸ್ಪರ್ಧಾತ್ಮಕ ಓದುಗರಿದ್ದಾರೆ. ವಿದ್ಯಾರ್ಥಿಗಳಿದ್ದಾರೆ. ಆದರೆ ಅವರಿಗೆ ಸೂಕ್ತ ಮಾರ್ಗದರ್ಶನದ ಕೊರತೆಯಿಂದ ಆ ಪ್ರತಿಭೆಗಳು ಗುರಿ ಮುಟ್ಟಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಕಲ್ಯಾಣ ಕರ್ನಾಟಕದಲ್ಲಿ ‘ಯಶಸ್ಸು ಕೋಚಿಂಗ್ ಸೆಂಟರ್’ ಉದ್ಘಾಟನೆ ಗೊಳ್ಳುತ್ತಿರುವುದು ಸಂತೋಷದ ವಿಷಯ ಎಂದರು.

ಅತಿಥಿಯಾಗಿದ್ದ ಡಾ.ಎಸ್.ಪಿ.ಮೇಲ್ಕೇರಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಓದಿನ ಕಡೆ ಹೆಚ್ಚಿನ ಗಮನವನ್ನು ಹರಿಸಿ ಇತರೆ ದುಶ್ಚಟಗಳಿಗೆ ಬಲಿಯಾಗದೆ ಬದುಕನ್ನು ಹಸನಾಗಿಸಿ ಕೊಂಡರೆ ಮಾತ್ರ ಜೀವನ ಸಾರ್ಥಕವಾಗುತ್ತದೆ ಎಂದರು.

ಕೆಎಎಸ್ ಅಧಿಕಾರಿ ನೀಲಗಂಗಾ ಹಾಗೂ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಶಾಂತಲಿಂಗೇಶ್ವರ ಸ್ವಾಮೀಜಿ ಮಾತನಾಡಿದರು. ನಿಮ್ಮ ಯಶಸ್ಸು ಸ್ಪರ್ಧಾತ್ಮಕ ತರಬೇತಿ ಸಂಸ್ಥೆಯ ನಿರ್ದೇಶಕ ಪಂಡಿತ್ ಮದುಗುಣಕಿ ಅಧ್ಯಕ್ಷತೆ ವಹಿಸಿದ್ದರು. ರವಿ ಬಿ.ಕೆ. ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.