ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕ.ಕ ಉತ್ಸವ ಆಚರಿಸದ ಆರೋಪ: ವಿಮಾನ ನಿಲ್ದಾಣ ನಿರ್ದೇಶಕರ ವಿರುದ್ಧ ದೂರು

Published : 18 ಸೆಪ್ಟೆಂಬರ್ 2024, 8:07 IST
Last Updated : 18 ಸೆಪ್ಟೆಂಬರ್ 2024, 8:07 IST
ಫಾಲೋ ಮಾಡಿ
Comments

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವದ ಪ್ರಯುಕ್ತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಧ್ವಜಾರೋಹಣ ಮಾಡಬೇಕು ಎಂದು ರಾಜ್ಯ ಸರ್ಕಾರ ಹೊರಡಿಸಿದ ಆದೇಶ ಉಲ್ಲಂಘಿಸಿದ ವಿಮಾನ ನಿಲ್ದಾಣದ ನಿರ್ದೇಶಕರು ಮತ್ತು ಇತರ ಅಧಿಕಾರಿಗಳನ್ನು ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ವಿಭಾಗದ ಜಿಲ್ಲಾ ಘಟಕದ ಪದಾಧಿಕಾರಿಗಳು ವಿಶ್ವವಿದ್ಯಾಲಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ವಿಮಾನ ನಿಲ್ದಾಣದಲ್ಲಿ ಧ್ವಜಾರೋಹಣ ಮಾಡಿಲ್ಲ. ಅಧಿಕಾರಿಗಳು ಉದ್ದೇಶಪೂರ್ವಕವಾಗಿಯೇ ಸರ್ಕಾರದ ಆದೇಶ ಉಲ್ಲಂಘಿಸಿದ್ದಾರೆ. ಇದು ಗಂಭೀರ ಸ್ವರೂಪದ ಅಪರಾಧ ಪ್ರಕರಣವಾಗಿದೆ. ರಾಷ್ಟ್ರೀಯ ಗೌರವ ಕಾಯ್ದೆಯ ಉಲ್ಲಂಘನೆಯಾಗಿದೆ. ಆದ್ದರಿಂದ ಕೂಡಲೇ ಅಧಿಕಾರಿಗಳನ್ನು ತನಿಖೆಗೆ ಒಳಪಡಿಸಿ ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಿಶೋರ ಆರ್.ಗಾಯಕವಾಡ, ಕೆಪಿಯುಡಬ್ಲ್ಯೂಸಿ ಜಿಲ್ಲಾಧ್ಯಕ್ಷ ಬಸವಲಿಂಗಪ್ಪ ಬಿರಾದಾರ, ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳು, ಮಾಹಿತಿ ಹಕ್ಕು ವಿಭಾಗದ ಪ್ರಧಾನ ಕಾರ್ಯದರ್ಶಿ ಭೀಮನಗೌಡ ಪರಗೊಂಡ ಹಾಗೂ ವಕೀಲ ಸಂದೀಪ್ ಬಿ.ಮಾಳಗೆ ದೂರಿನಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT