ಕಲಬುರಗಿ: ‘ಮಾದರಿ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಹಾಗೂ ಪ್ರಜಾಪ್ರತಿನಿಧಿ ಕಾಯ್ದೆ ಅನ್ವಯ ಚುನಾವಣೆಗೆ ಸಂಬಂಧಿಸಿದ ಅಪರಾಧ ಮಾಡಿರುವ ಸಂಸದ, ಬಿಜೆಪಿ ಅಭ್ಯರ್ಥಿ ಡಾ.ಉಮೇಶ ಜಾಧವ ಅವರ ಮೇಲೆ ಸೂಕ್ತ ಕ್ರಮ ಜರುಗಿಸಬೇಕು’ ಎಂದು ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ಸಲ್ಲಿಸಿದೆ.

‘ಕೋಮು ಬಣ್ಣ ಬಳಿಯುವ ಹೇಳಿಕೆಗಳ ಮೂಲಕ ಕಾಂಗ್ರೆಸ್ ಪಕ್ಷವನ್ನು ಹಿಂದೂ ವಿರೋಧಿ ಎಂದು ಬಿಂಬಿಸಲು ಜಾಧವ ಸುಳ್ಳು ಆರೋಪ ಮಾಡಿದ್ದಾರೆ. ಇತ್ತೀಚಿನ ರ‍್ಯಾಲಿಯಲ್ಲಿ ಜಾಧವ ಸುಳ್ಳು ಆರೋಪ ಮಾಡಿದ್ದು, ಕಾಂಗ್ರೆಸ್ ಪಕ್ಷ ಸುಪ್ರಿಂಕೋರ್ಟ್‌ನಲ್ಲಿ ಅಫಿಡವಿಟ್ ಹಾಕುವ ಮೂಲಕ 20 ವರ್ಷಗಳಿಂದ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವನ್ನು ತಡೆದಿತ್ತು. ಕಾಂಗ್ರೆಸ್ ನಾಯಕರು ಕಪ್ಪು ಪಟ್ಟಿ ಧರಿಸುವ ಮೂಲಕ ಶ್ರೀರಾಮ ಮಂದಿರ ಉದ್ಘಾಟನೆ ಸಂದರ್ಭದಲ್ಲಿ ಪ್ರತಿಭಟಿಸಿದ್ದರು. ಕಾಂಗ್ರೆಸ್ ಪಕ್ಷ ಸನಾತನಧರ್ಮ ಹಾಗೂ ಹಿಂದೂ ಧರ್ಮದ ವಿರುದ್ಧ ತುಷ್ಟೀಕರಣದಲ್ಲಿ ತೊಡಗಿದ್ದು ಕೀಳು ರಾಜಕೀಯ ಮಾಡುತ್ತಿದೆ ಎಂದು ಸುಳ್ಳು ಆರೋಪ ಮಾಡಿದ್ದರು.

ಈ ರೀತಿ ಸುಳ್ಳು ಹೇಳಿಕೆಗಳ ಮೂಲಕ ಕೋಮುಭಾವನೆ ಮೂಡಿಸುವ ಮೂಲಕ ಉಮೇಶ ಜಾಧವ ಚುನಾವಣೆಗೆ ಸಂಬಂಧಿಸಿದಂತೆ ಅಪರಾಧ ಮಾಡಿದ್ದಾರೆ’ ಎಂದು ಕಾಂಗ್ರೆಸ್ ದೂರಿನಲ್ಲಿ ಉಲ್ಲೇಖಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.