ಕಲಬುರ್ಗಿ: 'ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗಲು ಕಾಂಗ್ರೆಸ್ಸಿಗರ ನೀಚ ರಾಜಕಾರಣವೇ ಕಾರಣ' ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪುನರುಚ್ಚರಿಸಿದರು.

ಈಚೆಗೆ ಮೃತಪಟ್ಟ ಬಿಜೆಪಿ ವಿಭಾಗೀಯ ಸಂಘಟನಾ ಕಾರ್ಯದರ್ಶಿ ದತ್ತು ತೂಗಾಂವಕರ್ ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ಹೊರಟ ಸಂದರ್ಭ, ನಗರದ ವಿಮಾನ ನಿಲ್ದಾಣದಲ್ಲಿ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

'ದೇಶದ ಲಸಿಕೆ ಬಗ್ಗೆ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡಿದರು. ಈ ಲಸಿಕೆ ಪರಿಣಾಮಕಾರಿ ಇಲ್ಲ, ಇದರಿಂದ ಪುರುಷತ್ವ ಕಡಿಮೆ ಆಗುತ್ತದೆ ಎಂದೆಲ್ಲ ಸುಳ್ಳು ಸುದ್ದಿ ಹರಡಿದರು. ಇದರಿಂದ ಲಸಿಕೆ ಪಡೆಯಲು ಹಲವರು ಹಿಂಜರಿದರು. ಅದರ ಪರಿಣಾಮವೇ ಈಗ ಸೋಂಕು ಹಾಗೂ ಸಾವಿನ ಪ್ರಮಾಣ ಹೆಚ್ಚಾಗಿದೆ' ಎಂದೂ ದೂರಿದರು.

'ಲಸಿಕೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ ಮಾಡಿದೆ ಎಂಬ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆ ಸತ್ಯದಿಂದ ಕೂಡಿದೆ. ವ್ಯಾಕ್ಸಿನ್ ವಿಚಾರದಲ್ಲಿ ಜನರ ದಿಕ್ಕು ತಪ್ಪಿಸುವ ಕೆಲಸವನ್ನು ಕಾಂಗ್ರೆಸ್ ವ್ಯವಸ್ಥಿತವಾಗಿ ಮಾಡಿದೆ' ಎಂದೂ ಕಟೀಲ್ ಆರೋಪಿಸಿದರು.

'ಫೆಬ್ರುವರಿಯಲ್ಲಿ ಸ್ವತಃ ಪ್ರಧಾನಿ ಮೋದಿ ಅವರೇ ಲಸಿಕೆ ತಗೊಂಡು ಜನರಿಗೆ ಪ್ರೇರಣೆ ನೀಡಿದರು. ಆದರೂ ಜನ ಮೇ ವರೆಗೂ ಲಸಿಕೆಗಾಗಿ ಮುಂದೆ ಬರಲಿಲ್ಲ. ಈಗ ಅದೇ ಕಾಂಗ್ರೆಸ್ಸಿಗರು ಲಸಿಕೆ ಇಲ್ಲ ಎಂದು ಕಣ್ಣೀರು ಹಾಕುತ್ತಿದ್ದಾರೆ' ಎಂದರು.

ಸರ್ಕಾರಕ್ಕೆ ಹುಳುಕು ಮುಚ್ಚಿಕೊಳ್ಳುವ ತುರ್ತು: ಸಿದ್ದರಾಮಯ್ಯ

'ಸಿದ್ದರಾಮಯ್ಯ ಕೂಡ ಇದಕ್ಕೆ ಹೊರತಿಲ್ಲ. ಕಾಂಗ್ರೆಸ್ ಹೈಕಮಾಂಡ್ ಏನು ಮಾಡುತ್ತದೋ ಸಿದ್ದರಾಮಯ್ಯ ಸಹ ಅದನ್ನೇ ಮಾಡುತ್ತಾರೆ. ಅಧಿಕಾರಕ್ಕೆ ಈ ರೀತಿಯ ವರ್ತನೆಯನ್ನು ಜನ ಸಹಿಸುವುದಿಲ್ಲ. ಅದಕ್ಕಾಗಿಯೇ ಜನ ಅವರನ್ನು ವರುಣಾ ಕ್ಷೇತ್ರದಿಂದ ಓಡಿಸಿದ್ದಾರೆ. ಇದೇ ರೀತಿ ಮಾಡಿದರೆ ಬಾದಾಮಿಯಿಂದಲೂ ಓಡಿಸುತ್ತಾರೆ' ಎಂದೂ ಕಟೀಲ್ ಹೇಳಿದರು.

ಸಿದ್ದರಾಮಯ್ಯ ಸಭೆಗೆ ಸರ್ಕಾರ ಅಡ್ಡಗಾಲು: ತಿರುಗುಬಾಣ ಪ್ರಯೋಗಿಸಿದ ಯಡಿಯೂರಪ್ಪ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.