ಕಲಬುರ್ಗಿ:ಭೌತವಿಜ್ಞಾನಿ ಡಾ.ಬಾಲಸುಬ್ರಮಣ್ಯನ್ ಆರ್.ಅಯ್ಯರ್, ಹಿರಿಯ ಸಂಶೋಧಕ ಡಾ.ಎಂ.ಚಿದಾನಂದಮೂರ್ತಿ ಸೇರಿ ಐದು ಜನ ಗಣ್ಯರನ್ನು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ (ಸಿಯುಕೆ)ವು ಗೌರವ ಡಾಕ್ಟರೇಟ್ಗೆ ಆಯ್ಕೆ ಮಾಡಿದೆ.

ಮಂಗಳವಾರ ಕುಲಪತಿ ಪ್ರೊ.ಎಚ್.ಎಂ.ಮಹೇಶ್ವರಯ್ಯ ಮಾತನಾಡಿ,‘ಕಲಬುರ್ಗಿಯ ಹಿರಿಯ ಕಲಾವಿದ ಜೆ.ಎಸ್.ಖಂಡೇರಾವ್, ಕವಿ ಪ್ರೊ.ಸಿದ್ದಲಿಂಗಯ್ಯ ಹಾಗೂ ವಿಜ್ಞಾನಿ ಡಾ.ಟೆಸ್ಸಿ ಥಾಮಸ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು’ ಎಂದು ತಿಳಿಸಿದರು.

‘ಆಳಂದ ತಾಲ್ಲೂಕು ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಶೈಕ್ಷಣಿಕ ಸಭಾಂಗಣದಲ್ಲಿ ಜು.13ರಂದು ಬೆಳಿಗ್ಗೆ 10ಗಂಟೆಗೆ 3ನೇ ಘಟಿಕೋತ್ಸವ ಜರುಗಲಿದೆ.ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಚೇರ್ಮನ್ ಪ್ರೊ.ಅನಿಲ್ ಡಿ.ಸಹಸ್ರಬುಧೆ ಘಟಿಕೋತ್ಸವ ಭಾಷಣ ಮಾಡುವರು’ ಎಂದು ಮಾಹಿತಿ ನೀಡಿದರು.

‘24 ಸಂಶೋಧನಾ ವಿದ್ಯಾರ್ಥಿಗಳಿಗೆ ಪಿಎಚ್.ಡಿ, 43 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಹಾಗೂ 910 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.