ಕಲಬುರಗಿ: ‘ತೋಟಗಾರಿಕಾ ಜಮೀನುಗಳ ಅಭಿವೃದ್ಧಿಗೆ ಅಧಿಕಾರಿಗಳು ಮುಂದಾಗಬೇಕು’ ಎಂದು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಹೇಳಿದರು.

ನಗರದ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಸಭಾಂಗಣದಲ್ಲಿ ತೋಟಗಾರಿಕೆ ಕ್ಷೇತ್ರ ಹಾಗೂ ನರ್ಸರಿ ಅಧಿಕಾರಿಗಳು, ಸಿಬ್ಬಂದಿಗೆ ಬುಧವಾರ ನಡೆದ ಕ್ಷೇತ್ರದ ಅಭಿವೃದ್ಧಿ, ಕಂದಾಯ ದಾಖಲಾತಿ ಹಾಗೂ ನರ್ಸರಿ ನಿರ್ವಹಣೆ ಕುರಿತ ತರಬೇತಿ ಹಾಗೂ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬೇರೆ ಇಲಾಖೆಗಳಿಗೆ ಹೋಲಿಸಿದರೆ ತೋಟಗಾರಿಕೆ ಇಲಾಖೆ ಹೆಚ್ಚು ಉತ್ಕೃಷ್ಟವಾದ ಜಮೀನುಗಳನ್ನು ಹೊಂದಿದೆ. ವಿವಿಧ ಯೋಜನೆಗಳಡಿ ಕಾಮಗಾರಿ ಮಾಡುವ ಮೂಲಕ ತೋಟಗಾರಿಕಾ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸಬೇಕು ಎಂದರು.

ಇಲಾಖೆಯ ಹೆಚ್ಚುವರಿ ನಿರ್ದೇಶಕ ಪ್ರಕಾಶ ಎಂ.ಸೊಬರದ ಕಂದಾಯ ದಾಖಲಾತಿ ಹಾಗೂ ನರ್ಸರಿ ನಿರ್ವಹಣೆ ಕುರಿತು ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ತರಬೇತಿ ನೀಡಿದರು.

ಜಂಟಿ ನಿರ್ದೇಶಕ ಮಂಜುನಾಥ ನಾರಾಯಣಪುರ ಹಾಗೂ ಉಪನಿರ್ದೇಶಕ ಸಂತೋಷ ಇನಾಂದಾರ ಮಾತನಾಡಿದರು.

ಉಪನಿರ್ದೇಶಕರಾದ ಪ್ರಭುರಾಜ ಎಚ್.ಎಸ್., ವಿಶ್ವನಾಥ ಜಿರಳೆ, ಹಿರಿಯ ಸಹಾಯಕ ನಿರ್ದೇಶಕ ಶಂಕರ ಪಟವಾರಿ, ವಿವಿಧ ತಾಲ್ಲೂಕುಗಳ ಸಹಾಯಕ ನಿರ್ದೇಶಕರು, ಕಲಬುರಗಿ, ಬೀದರ್, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.