ಕಲಬುರಗಿ: ರಾಜ್ಯ ವಿಧಾನಸಭಾ ಚುನಾವಣೆಯ ನೀತಿ ಸಂಹಿತೆ ವೇಳೆ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದ್ದ ಕಲಬುರಗಿ (ಗುಲ್ಬರ್ಗಾ) ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ(ಜಿಮ್ಸ್) ಗುತ್ತಿಗೆ ನೌಕರನಾಗಿದ್ದ ಸ್ಟೋರ್ ಕೀಪರ್ ಕಂ ಕ್ಲರ್ಕ್ ಒಬ್ಬರನ್ನು ಸೇವೆಯಿಂದ ವಜಾಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ವಿವೇಕ ಸಾಗರ ರಗಟೆ ವಜಾಗೊಂಡ ಕ್ಲರ್ಕ್. ಸರ್ಕಾರಿ ನೌಕರ ಆಗಿದ್ದು, ವಿಧಾನಸಭಾ ಚುನಾವಣೆ ವೇಳೆ ಒಂದು ರಾಜಕೀಯದ ಪಕ್ಷದ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡುತ್ತಿರುವ ಬಗ್ಗೆ ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಶ್ರವಣಕುಮಾರ ಡಿ.ನಾಯಕ ಅವರು ದೂರು ನೀಡಿದ್ದರು.

ಶ್ರವಣಕುಮಾರ ಅವರ ದೂರು ಆಧರಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದರು. ಆ ಬಳಿಕ ಪರಿಶೀಲನಾ ವರದಿಯನ್ನು ಜಿಲ್ಲಾಧಿಕಾರಿಗೆ ಕಳುಹಿಸಲಾಗಿದ್ದು, ಸ್ಟೋರ್ ಕೀಪರ್ ವಿವೇಕ ಸಾಗರ ರಗಟೆ ಅವರನ್ನು ಕೆಲಸದಿಂದ ವಜಾ ಮಾಡಿದ್ದಾಗಿ ಆದೇಶದಲ್ಲಿ ತಿಳಿಸಿದ್ದಾರೆ ಎಂದು ಜಿಮ್ಸ್ ನಿರ್ದೇಶಕಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.