ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಅಭಿವೃದ್ಧಿಗಾಗಿಗುಲಬರ್ಗಾ ವಿಶ್ವವಿದ್ಯಾಲಯ ಹಾಗೂ ರಾಯಚೂರು ವಿಶ್ವವಿದ್ಯಾಲಯಗಳು ಒಟ್ಟಾಗಿ ಕೆಲಸ ಮಾಡಲು ನಿರ್ಧರಿಸಿವೆ.

ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ದಯಾನಂದ ಅಗಸರ ಮತ್ತು ರಾಯಚೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಹರೀಶ ರಾಮಸ್ವಾಮಿ ಅವರ ನೇತೃತ್ವದಲ್ಲಿ ಶುಕ್ರವಾರ ಇಲ್ಲಿ ನಡೆದ ಉಭಯ ವಿಶ್ವವಿದ್ಯಾಲಯಗಳ ಅಧಿಕಾರಿಗಳ ಜಂಟಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.

‘ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ರಾಯಚೂರು ವಿಶ್ವವಿದ್ಯಾಲಯದ ಶೈಕ್ಷಣಿಕ ಅಭಿವೃದ್ಧಿಗೆ ಹಾಗೂ ಆಡಳಿತಾತ್ಮಕವಾಗಿ ಬೇಕಾಗುವ ಎಲ್ಲ ಸಂಪನ್ಮೂಲಗಳನ್ನು ಒದಗಿಸಿಕೊಡಲು ಗುಲಬರ್ಗಾ ವಿಶ್ವವಿದ್ಯಾಲಯ ಸದಾ ಸಿದ್ಧ’ ಎಂದು ದಯಾನಂದ ಅಗಸರ ಹೇಳಿದರು.

ಈ ಎರಡೂ ವಿಶ್ವವಿದ್ಯಾಲಯಗಳು ಪರಿವರ್ತನಾ ಅವಧಿಯಲ್ಲಿ ಯಾವ ಗೊಂದಲ ಇಲ್ಲದಂತೆ ನೋಡಿಕೊಳ್ಳಬೇಕು ಎಂದು ಉಭಯ ವಿಶ್ವವಿದ್ಯಾಲಯಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸಲಹೆ ನೀಡಿದರು.

‘ಗುಣಾತ್ಮಕ, ಕ್ರಿಯಾಶೀಲ ಹಾಗೂ ಸೃಜನಶೀಲತೆಯಿಂದ ಕೂಡಿದ ವ್ಯವಸ್ಥೆಯನ್ನು ಗಟ್ಟಿಗೊಳಿಸಿ ವಿದ್ಯಾರ್ಥಿ ಸಮುದಾಯಕ್ಕೆ ಶ್ರೇಷ್ಠ ಮತ್ತು ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಉಭಯ ವಿವಿಗಳು ಒಟ್ಟಾಗಿ ಕೆಲಸ ಮಾಡಲಿವೆ. ನಮ್ಮ ವಿದ್ಯಾರ್ಥಿಗಳು ಸ್ಪರ್ಧಾತ್ಮಕವಾಗಿಜಾಗತಿಕ ಮಟ್ಟದಲ್ಲಿ ಬೆಳೆಯುವಂತಹ ವಾತಾವರಣ ನಿರ್ಮಿಸಲು ನಾವು ಕಂಕಣ ಬದ್ಧರಾಗಿದ್ದೇವೆ‘ ಎಂದುಹರೀಶ ರಾಮಸ್ವಾಮಿ ಹೇಳಿದರು.

’ಗುಲಬರ್ಗಾ ವಿವಿಯಿಂದ ಬೇರ್ಪಟ್ಟಿರುವ ನಮ್ಮ ವಿವಿಗೆ ಗುಲಬರ್ಗಾ ವಿವಿ ಉತ್ತಮ ಸಹಕಾರ ನೀಡುತ್ತಿದೆ. ಇದೇ ಸಹಕಾರ ಮುಂದೆಯೂ ಇರಲಿ‘ ಎಂದು ಆಶಿಸಿದರು.

ಗುಲಬರ್ಗಾ ವಿಶ್ವವಿದ್ಯಾಲಯದ ಕುಲಸಚಿವ ಶರಣಬಸಪ್ಪ ಕೋಟೆಪ್ಪಗೋಳ, ರಾಯಚೂರು ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ವಿಶ್ವನಾಥ ಎಂ. ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.