ಕಲಬುರಗಿ: ಸ್ವಾತಂತ್ರ್ಯ ದಿನಾಚರಣೆಯ ಹಿಂದಿನ ದಿನವಾದ ಬುಧವಾರ ತಡರಾತ್ರಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಮುಖಂಡರು ನಗರದಲ್ಲಿ ಅಹೋರಾತ್ರಿ ಉಪನ್ಯಾಸ, ಸಾಂಸ್ಕೃತಿಕ ಕಾರ್ಯಕ್ರಮ, ಸಂವಾದ ನಡೆಸಿದರು.

ಜಗತ್ ವೃತ್ತದ ಅಂಬೇಡ್ಕರ್ ಪ್ರತಿಮೆ ಮುಂಭಾಗದ ರಸ್ತೆ ಬದಿಯಲ್ಲಿ ಜಮಾಯಿಸಿದ ಮುಖಂಡರು ‘ಹಗಲು ರಾತ್ರಿ ಸೀಳಿ ನಿದ್ರೆಯನ್ನು ಒದ್ದರು’, ‘ಎಷ್ಟು ವರ್ಷ ಆಯ್ತಮ್ಮ ಸ್ವಾತಂತ್ರ್ಯ’, ‘ಎಲ್ಲಿಗೆ ಬಂತು ಯಾರಿಗೆ ಬಂತು 47ರ ಸ್ವಾತಂತ್ರ್ಯ’ ಸೇರಿದಂತೆ ಭೀಮ ಗೀತೆ, ದೇಶಭಕ್ತಿ ಗೀತೆಗಳನ್ನು ಹಾಡಿದರು.

ನಿರುದ್ಯೋಗ, ಅಪೌಷ್ಟಿಕತೆಯಿಂದ ಕೋಟಿಗಟ್ಟಲೇ ಜನ ನರಳುತ್ತಿದ್ದಾರೆ. ಸ್ವಾತಂತ್ರ್ಯ ಹಾಗೂ ಸಂವಿಧಾನದ ಅಸ್ತಿತ್ವಕ್ಕೆ ಧಕ್ಕೆ ಬಂದಿದೆ. ಆಳುವ ಪಕ್ಷಗಳು ಬಂಡವಾಳ ಶಾಹಿಗಳ ಪರವಾಗಿ ಕೆಲಸ ಮಾಡುತ್ತಿವೆ. ದುಡಿಯುನ ಕಾರ್ಮಿಕರಿಗೆ ಮತ್ತು ರೈತರಿಗೆ ನ್ಯಾಯ ಸಿಕ್ಕಿಲ್ಲ. ಬಡವರು ಬಡವರಾಗಿದ್ದು ಶ್ರೀಮಂತರು ಇನ್ನಷ್ಟು ಶ್ರೀಮಂತರಾಗುತ್ತಿದ್ದಾರೆ ಎಂಬೆಲ್ಲ ವಿಚಾರಗಳನ್ನು ಮುಖಂಡರು ಪ್ರಸ್ತಾಪಿಸಿದರು.

ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಎಂ.ಬಿ.ಸಜ್ಜನ್, ಜಿಲ್ಲಾ ಅಧ್ಯಕ್ಷೆ ಶಾಂತಾ ಎನ್. ಘಂಟಿ, ವಿಶ್ರಾಂತ ಕುಲಪತಿ ಪಿ.ಕೆ.ತಿವಾರಿ, ಕೆಪಿಆರ್‌ಎಸ್ ಜಿಲ್ಲಾ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಪ್ರಮುಖರಾದ ಅಲ್ತಾಫ್ ಇನಾಂದಾರ್, ಗೌರಮ್ಮ ಪಿ.ಪಾಟೀಲ, ನಾಗಯ್ಯ ಸ್ವಾಮಿ, ಮೇಘರಾಜ ಕಠಾರೆ, ರೇವಣಸಿದ್ದ ಸೇರಿ ಹಲವರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.