ಜೇವರ್ಗಿ (ಕಲಬುರ್ಗಿ ಜಿಲ್ಲೆ): ಮಳೆ ಮತ್ತು ಪ್ರವಾಹ ಪರಿಸ್ಥಿತಿಯ ವೀಕ್ಷಣೆಗೆ ಶುಕ್ರವಾರ ಕಲಬುರ್ಗಿ ಜಿಲ್ಲೆಗೆ ಭೇಟಿ ನೀಡಿರುವ ಕಂದಾಯ ಸಚಿವ ಆರ್. ಅಶೋಕ ಅವರು ಜೇವರ್ಗಿ ತಾಲ್ಲೂಕಿನ ಪ್ರವಾಹ ಪೀಡಿತ ಪ್ರದೇಶಗಳನ್ನು ವೀಕ್ಷಿಸಲಿಲ್ಲ. ಜನರ ಸಮಸ್ಯೆಗಳನ್ನು ಆಲಿಸಲಿಲ್ಲ ಎಂದು ಜೇವರ್ಗಿ ಶಾಸಕ ಅಜಯ್ ಸಿಂಗ್ ಆರೋಪಿಸಿದರು.

ಜೇವರ್ಗಿ ತಾಲ್ಲೂಕಿನ ಇಂತಿಂಥ ಪ್ರದೇಶಗಳಿಗೆ ಭೇಟಿ ನೀಡುವಂತೆ ಸಚಿವರಿಗೆ ಕೋರಿದ್ದೆವು. ಆದರೆ, ಅವರು ಸಮರ್ಪಕವಾಗಿ ವೀಕ್ಷಿಸಲಿಲ್ಲ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಪ್ರವಾಹ ಪರಿಸ್ಥಿತಿಯ ವೀಕ್ಷಣೆಗೆ ಬಂದಿರುವ ಸಚಿವರು ಈ ಭಾಗದ ಸಮಸ್ಯೆ, ಸಂಕಷ್ಟಗಳಿಗೆ ಸ್ಪಂದಿಸಬೇಕು. ಪ್ರವಾಹ ಸಮಸ್ಯೆ ನಿವಾರಿಸುವ, ಪರಿಹಾರ ಘೋಷಿಸುವ ಮತ್ತು ಜನರಲ್ಲಿ ಧೈರ್ಯ ತುಂಬುವ ಕೆಲಸ ಮಾಡಬೇಕಿತ್ತು. ಆದರೆ, ಇದ್ಯಾವುದನ್ನು ಅವರು ಮಾಡಲಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.