ಕಲಬುರಗಿ: ಬಾಲಕಿಯನ್ನು ಪುಸಲಾಯಿಸಿ ಮುಂಬೈಗೆ ಅಪಹರಿಸಿಕೊಂಡು ಹೋಗಿ ನಿರಂತರ ಅತ್ಯಾಚಾರ ಮಾಡಿರುವುದು ಸಾಬೀತಾಗಿದ್ದರಿಂದ ಕಮಲಾಪುರ ತಾಲ್ಲೂಕಿನ ಮುರುಡಿ ಗ್ರಾಮದ ಶಿವಾನಂದ ಸುಭಾಷ್ ಧನ್ನೂರೆ ಎಂಬಾತನಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ವಿಶೇಷ ಪೋಕ್ಸೊ) ನ್ಯಾಯಾಲಯವು 20 ವರ್ಷ ಜೈಲು ಶಿಕ್ಷೆ ಹಾಗೂ ವಿವಿಧ ಕಾಯ್ದೆಗಳಡಿ ₹ 28 ಸಾವಿರ ದಂಡ ವಿಧಿಸಿದೆ.

ಮಹಾಗಾಂವ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಶಿವಾನಂದ 2022ರ ಮಾರ್ಚ್ 11ರಂದು ಮಧ್ಯಾಹ್ನ ಗ್ರಾಮದ ಕೆರೆಯ ಪಕ್ಕದ ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕಿಯನ್ನು ಪ್ರೀತಿಸುವುದಾಗಿ ಹೇಳಿ ಆಕೆಯನ್ನು ಬೈಕ್ನಲ್ಲಿ ಕೂರಿಸಿಕೊಂಡು ಕಲಬುರಗಿ, ಆಳಂದ ಮಾರ್ಗವಾಗಿ ಮಹಾರಾಷ್ಟ್ರದ ಉಮರ್ಗಾಕ್ಕೆ ಕರೆದೊಯ್ದನು. ಅಲ್ಲಿಂದ ಬಸ್ ಮೂಲಕ ಮುಂಬೈಗೆ ಕರೆದೊಯ್ದು ಅಲ್ಲಿ ಗಂಡ, ಹೆಂಡತಿ ಎಂದು ಹೇಳಿ ಮನೆ ಬಾಡಿಗೆಗೆ ಪಡೆದು 2022ರ ಮಾರ್ಚ್ 12ರಿಂದ ಡಿಸೆಂಬರ್ 11ರವರೆಗೆ ಅಕ್ರಮ ಬಂಧನದಲ್ಲಿಟ್ಟು, ಅತ್ಯಾಚಾರ ಎಸಗಿದ್ದ. ಈ ಬಗ್ಗೆ ಪೋಷಕರು ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಡಿಎಸ್ಬಿ ಪೊಲೀಸ್ ಇನ್ಸ್ಪೆಕ್ಟರ್ ಬಸವರಾಜ ತೇಲಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಅವರು ಅಪರಾಧಿಗೆ ಪೋಕ್ಸೊ ಕಾಯ್ದೆ ಹಾಗೂ ಐಪಿಸಿ ಕಲಂಗಳಡಿ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದರು.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ ಬಿ. ತುಪ್ಪದ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.