ಕಲಬುರಗಿಯ ಪೊಲೀಸ್ ಚೌಕ್ ಬಳಿ ‘ನೋ ಪಾರ್ಕಿಂಗ್’ ಜಾಗದಲ್ಲಿ ವಾಹನಗಳು ನಿಲ್ಲಿಸಿರುವುದು –ಪ್ರಜಾವಾಣಿ ಚಿತ್ರ
ಕಲಬುರಗಿಯ ಕೆಕೆಸಿಸಿಐ ಕಚೇರಿ ಬಳಿ ರಸ್ತೆಯಲ್ಲಿ ದ್ವಿಚಕ್ರ ವಾಹನಗಳನ್ನು ನಿಲ್ಲಿಸಿರುವುದು –ಪ್ರಜಾವಾಣಿ ಚಿತ್ರ
ಕಲಬುರಗಿಯ ಆರ್ಕೀಡ್ ಮಾಲ್ ಬಳಿ ಚರಂಡಿ ಸ್ಲ್ಯಾಬ್ ಮೇಲೆ ದ್ವಿಚಕ್ರ ವಾಹನಗಳನ್ನು ನಿಲ್ಲಿಸಿರುವುದು –ಪ್ರಜಾವಾಣಿ ಚಿತ್ರ
ಪೊಲೀಸ್ ಕಮಿಷನರ್ ಚೇತನ್ ಆರ್.
ವಾಹನಗಳನ್ನು ಅಡ್ಡಾದಿಡ್ಡಿ ನಿಲ್ಲಿಸುವುದರಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತದೆ ಎಂಬ ಕನಿಷ್ಠ ಪರಿಜ್ಞಾನ ಇಲ್ಲದೇ ವಿದ್ಯಾವಂತ ಸವಾರರೇ ಎಲ್ಲೆಂದರಲ್ಲಿ ವಾಹನ ನಿಲ್ಲಿಸುತ್ತಿದ್ದಾರೆ. ಎಲ್ಲರೂ ಕಡ್ಡಾಯವಾಗಿ ಸಂಚಾರ ನಿಯಮ ಪಾಲಿಸುವುದನ್ನು ರೂಢಿಸಿಕೊಳ್ಳಬೇಕು. ಸಂಚಾರ ನಿಯಮ ಪಾಲನೆ ಕುರಿತು ಶಾಲಾ ಕಾಲೇಜುಗಳಲ್ಲಿ ಅರಿವು ಮೂಡಿಸಲಾಗುತ್ತಿದೆ.
ಚೇತನ್ ಆರ್. ಕಲಬುರಗಿ ನಗರ ಪೊಲೀಸ್ ಕಮಿಷನರ್ನಗರದ ವಾಣಿಜ್ಯ ಚಟುವಟಿಕೆಯ ಸಮುಚ್ಛಯಗಳಲ್ಲಿ ವಾಹನಗಳ ನಿಲುಗಡೆಗೆ ಸೆಲ್ಲಾರ್‌ಗಳನ್ನು ಕಡ್ಡಾಯವಾಗಿ ಮೀಸಲಿಡಬೇಕು. ಆದರೆ ಕೆಲ ಮಾಲ್ ಹಾಗೂ ವಾಣಿಜ್ಯ ಸಮುಚ್ಛಯಗಳ ಮಾಲೀಕರು ಆ ಜಾಗವನ್ನೂ ಬಾಡಿಗೆಗೆ ನೀಡಿದ್ದಾರೆ. ಕೆಲ ಕಡೆ ಮನಸೋ ಇಚ್ಛೆ ವಾಹನ ನಿಲುಗಡೆಗೆ ಶುಲ್ಕವನ್ನು ವಸೂಲಿ ಮಾಡಲಾಗುತ್ತಿದೆ. ಈ ಮಳಿಗೆಗಳಿಗೆ ನಗರಪಾಲಿಕೆ ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಆಗಾಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು
ಸೂರ್ಯಕಾಂತ ನಿಂಬಾಳ್ಕರ್ ನಗರ ಯೋಜನಾ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಕಲಬುರಗಿ ಮಹಾನಗರ ಪಾಲಿಕೆ