ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

SSLC Result | 29ರಿಂದ 34ನೇ ಸ್ಥಾನಕ್ಕೆ ಕುಸಿದ ಕಲಬುರಗಿ, ಶೂನ್ಯದಲ್ಲೂ ದಾಖಲೆ

Published 9 ಮೇ 2024, 6:54 IST
Last Updated 9 ಮೇ 2024, 6:54 IST
ಅಕ್ಷರ ಗಾತ್ರ

ಕಲಬುರಗಿ: ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಕಳೆದ ಬಾರಿಯ 29ನೇ ಸ್ಥಾನದಿಂದ 34ನೇ‌ ಸ್ಥಾನಕ್ಕೆ ಕುಸಿದಿದೆ. ಕಲಬುರಗಿ ವಿಭಾಗದ 43 ಶಾಲೆಗಳು ಶೂನ್ಯ ಫಲಿತಾಂಶ ದಾಖಲಿಸಿವೆ.

ಪ್ರಸಕ್ತ ಸಾಲಿನ ವಾರ್ಷಿಕ ಪರೀಕ್ಷೆಗೆ 45,980 ವಿದ್ಯಾರ್ಥಿಗಳು ಕುಳಿತಿದ್ದರು. ಅವರಲ್ಲಿ 24,380 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಶೇ 53.04ರಷ್ಟು ವಿದ್ಯಾರ್ಥಿಗಳ ಉತ್ತೀರ್ಣದೊಂದಿಗೆ ರಾಜ್ಯದಲ್ಲಿ ಕಲಬುರಗಿ 34ನೇ ಸ್ಥಾನ ಪಡೆದಿದೆ.

ಕಲಿಕೆಯಲ್ಲಿ ಹಿಂದುಳಿದಿರುವ ವಿದ್ಯಾರ್ಥಿಗಳಿಗೆ ಇನ್ನಷ್ಟು ತರಬೇತಿ ನೀಡಿ, ಅವರನ್ನು ಪರೀಕ್ಷೆಗೆ ಸಜ್ಜುಗೊಳಿಸಲು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಿಗೆ ‘ಕಲಿಕಾ ಆಸರೆ’ ಪುಸ್ತಕ ನೀಡಲಾಗಿತ್ತು. ‌ಆದರೂ ಫಲಿತಾಂಶದಲ್ಲಿ ಸುಧಾರಣೆ ಕಂಡಿಲ್ಲ. ಯಾದಗಿರಿ, ಕಲಬುರಗಿ, ಬೀದರ್, ಕೊಪ್ಪಳ ಮತ್ತು ರಾಯಚೂರು ಕ್ರಮವಾಗಿ 35, 34, 33, 32 ಮತ್ತು 31 ಸ್ಥಾನದಲ್ಲಿವೆ.

ಸಮಾಧಾನ ಎಂಬಂತೆ ವಿಜಯನಗರ 27 ಮತ್ತು ಬಳ್ಳಾರಿ 28ನೇ ಸ್ಥಾನ ಪಡೆದಿವೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕಲಬುರಗಿ ವಿಭಾಗದಲ್ಲಿನ 43 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ದಾಖಲಾಗಿದೆ. ರಾಜ್ಯದಲ್ಲಿ ಒಟ್ಟು 78 ಶಾಲೆಗಳು ಶೂನ್ಯ ಫಲಿತಾಂಶ ದಾಖಲಿಸಿದ್ದು, ಅವುಗಳಲ್ಲಿ ಕಲಬುರಗಿ ವಿಭಾಗದ್ದೇ ಅರ್ಧದಷ್ಟು ಇದೆ. ಕಲಬುರಗಿಯಲ್ಲಿ ರಾಜ್ಯದಲ್ಲೇ ಅತ್ಯಧಿಕ 18 ಶಾಲೆಗಳು ಶೂನ್ಯ ಸುತ್ತಿವೆ. ಉಳಿದಂತೆ ಬೀದರ್‌ನಲ್ಲಿ 9, ಯಾದಗಿರಿಯಲ್ಲಿ 6, ರಾಯಚೂರಿನಲ್ಲಿ 5, ಕೊಪ್ಪಳ ಮತ್ತು ವಿಜಯನಗರದಲ್ಲಿ ತಲಾ ಎರಡು ಹಾಗೂ ಬಳ್ಳಾರಿಯಲ್ಲಿ ಒಂದು ಶಾಲೆ ಶೂನ್ಯ ಫಲಿತಾಂಶ ಗಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT