ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (ಕೆಕೆಆರ್ಟಿಸಿ) 925 ಚಾಲಕ ಹಾಗೂ 694 ಚಾಲಕ-ಕಂ-ನಿರ್ವಾಹಕರ ಒಟ್ಟು 1,619 ಹುದ್ದೆಗಳ ನೇರ ನೇಮಕಾತಿಗೆ ಸಂಬಂಧ ಶನಿವಾರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದ್ದು, ಆಕ್ಷೇಪಣೆಗೆ ಆಹ್ವಾನಿಸಿದೆ.

2020ರಲ್ಲಿ ಹೊರಡಿಸಿದ ನೇಮಕಾತಿ ಅಧಿಸೂಚನೆಯಲ್ಲಿ 1,619 ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆಯಲಾಗಿತ್ತು. ಇದರಲ್ಲಿ 1,295 ಸ್ಥಳೀಯ ವೃಂದದ ಹುದ್ದೆಗಳು ಹಾಗೂ 141 ಪರಿಶಿಷ್ಟ ಜಾತಿ ಮತ್ತು ವರಿಶಿಷ್ಟ ಪಂಗಡಕ್ಕೆ ಸೇರಿದ ಹಿಂಬಾಕಿ (ಬ್ಯಾಕ್ ಲಾಗ್) ಹುದ್ದೆಗಳು ಸೇರಿವೆ.

ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸಂಸ್ಥೆಯ https://kkrtcjobs.karnataka.gov.inನಲ್ಲಿ ಆಯ್ಕೆ ಪಟ್ಟಿ ನೋಡಬಹುದು. ಆಕ್ಷೇಪಣೆಗಳು ಇದ್ದಲ್ಲಿ ಆನ್ಲೈನ್ ಮೂಲಕ ಫೆಬ್ರುವರಿ 12ರ ಸಂಜೆ 5ರ ಒಳಗಾಗಿ ಸಲ್ಲಿಸಬೇಕು. ಲಿಖಿತ ಅಕ್ಷೇಪಣೆ ಸಲ್ಲಿಕೆಗೆ ಅವಕಾಶವಿಲ್ಲ. ಅವಧಿ ಮೀರಿ ಬಂದ ಆಕ್ಷೇಪಣೆ ಪರಿಗಣಿಸುವುದಿಲ್ಲ ಎಂದು ಸಂಸ್ಥೆಯು ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 63663 74977, ದೂರವಾಣಿ 08472-227687ಗೆ ಸಂಪರ್ಕಿಸಲು ಕೋರಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.