ನಾಲವಾರ(ವಾಡಿ): ನಾಲವಾರ ಕೋರಿಸಿದ್ಧೇಶ್ವರ ಸಂಸ್ಥಾನ ಮಠದ ಜಾತ್ರೆ ಮಹೋತ್ಸವ ಪ್ರಯುಕ್ತ ಶುಕ್ರವಾರ ಅದ್ಧೂರಿ ರಥೋತ್ಸವ ನಡೆಯಿತು. ರಾಜ್ಯ ಮತ್ತು ಹೊರರಾಜ್ಯದಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು. ಜಾತ್ರೆ ನಿಮಿತ್ತ ಒಂದು ವಾರದಿಂದ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಸಾಂಪ್ರದಾಯಿಕ ಪೋಷಾಕು ಧರಿಸಿದ್ದ ಡಾ. ಸಿದ್ಧ ತೋಟೇಂದ್ರ ಶಿವಾಚಾರ್ಯರು ರಾತ್ರಿ 8.30ಕ್ಕೆ ರಥೋತ್ಸವಕ್ಕೆ ಚಾಲನೆ ನೀಡಿದರು. ವಿವಿಧ ಬಗೆಯ ಹೂವುಗಳಿಂದ ಅಲಂಕೃತಗೊಂಡಿದ್ದ ರಥಕ್ಕೆ ಭಕ್ತರು ಉತ್ತುತ್ತಿ ಬಾಳೆಹಣ್ಣು, ಹೂಗಳನ್ನು ಎಸೆದು ಮನದ ಹರಕೆ ತೀರಿಸಿದರು. ದಾರಿಯುದ್ದಕ್ಕೂ ಭಕ್ತರು ಕೋರಿಸಿದ್ದೇಶ್ವರ ಮಹಾರಾಜಕೀ ಜೈ ಎಂದು ಜೈಕಾರ ಹಾಕಿದರು.

ದೇವಸ್ಥಾನದ ಆವರಣದಲ್ಲಿ ಹಾಗೂ ರಥದ ಎದುರು ಜರುಗಿದ ನಂದಿಕೋಲು ಭಕ್ತರ ಮನ ಸೆಳೆಯಿತು. ದೇವಸ್ಥಾನಕ್ಕೆ ವಿದ್ಯುತ್ ಅಲಂಕಾರ ಮಾಡಲಾಗಿತ್ತು. ರಾಜ್ಯದ ವಿವಿಧ ಜಿಲ್ಲೆಗಳ ಹಾಗೂ ನೆರೆಯ ಆಂಧ್ರ, ತೆಲಂಗಾಣ, ಮಹಾರಾಷ್ಟ್ರ, ಗೋವಾ ರಾಜ್ಯದಿಂದ ಭಕ್ತರು ಬಂದಿದ್ದರು.

ಕೋವಿಡ್ ಕಾರಣ ಜಾತ್ರೆಯನ್ನು ರದ್ದುಗೊಳಿಸಿ ಚಿತ್ತಾಪುರ ತಾಲ್ಲೂಕು ಆಡಳಿತ ಆದೇಶ ಹೊರಡಿಸಿತ್ತು. ಆದರೆ, ಧಾರ್ಮಿಕ ದತ್ತಿ ಇಲಾಖೆಯು ಜಾತ್ರೆ, ಉತ್ಸವಗಳ ಮೇಲಿನ ನಿರ್ಬಂಧವನ್ನು ತೆರವುಗೊಳಿಸಿದ್ದರಿಂದ ರಥೋತ್ಸವ ನೆರವೇರಿತು. ವಾಡಿ ಮತ್ತು ಚಿತ್ತಾಪುರ ಪೊಲೀಸರು ಬಂದೋಬಸ್ತ್ ಕಲ್ಪಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.