ಬೆಂಗಳೂರು: ಕುವೈತ್ ಅಗ್ನಿ ದುರಂತದಲ್ಲಿ ಸಾವಿಗೀಡಾಗಿರುವ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಸರಸಂಬ ಗ್ರಾಮದ ವಿಜಯಕುಮಾರ್ ಬಿನ್ ಕೊಬ್ಬಣ್ಣ ಪ್ರಸನ್ನ (40) ಅವರ ಕುಟುಂಬಕ್ಕೆ ‘ಮುಖ್ಯಮಂತ್ರಿಗಳ ಪರಿಹಾರ ನಿಧಿ’ಯಿಂದ ₹ 5 ಲಕ್ಷ ಪರಿಹಾರ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಎಂಟು ವರ್ಷಗಳಿಂದ ವಾಹನ ಚಾಲಕರಾಗಿ ಕುವೈತ್ನಲ್ಲಿ ಕೆಲಸ ಮಾಡುತ್ತಿದ್ದ ಅನಿವಾಸಿ ಭಾರತೀಯ ವಿಜಯಕುಮಾರ್ ಅವರ ಕುಟುಂಬದಲ್ಲಿ ಅವರ ಅಣ್ಣ, ತಮ್ಮಂದಿರುವ ಸೇರಿದಂತೆ ಎಂಟು ಜನ ಅವಲಂಬಿತರಿದ್ದಾರೆ. ಈ ಅಗ್ನಿ ದುರಂತದಲ್ಲಿ ಮೃತಪಟ್ಟಿದ್ದ ಕೇರಳದವರ ಕುಟುಂಬಕ್ಕೆ ಅಲ್ಲಿನ ಸರ್ಕಾರ ₹5 ಲಕ್ಷ ಪರಿಹಾರ ಘೋಷಿಸಿದೆ. ಅದೇ ರೀತಿ ರಾಜ್ಯ ಸರ್ಕಾರವೂ ಆರ್ಥಿಕ ನೆರವು ಘೋಷಿಸಬೇಕೆಂದು ರಾಜ್ಯ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಆರತಿ ಕೃಷ್ಣ ಅವರು ಮುಖ್ಯಮಂತ್ರಿಗೆ ಮನವಿ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.