ಕಲಬುರಗಿ: ಇಲ್ಲಿನ ಕಾರ್ಮಿಕ ಇಲಾಖೆ ಕಚೇರಿಯಲ್ಲಿ ಕಟ್ಟಡ ಕಾರ್ಮಿಕರು ಸೇರಿದಂತೆ ವಿವಿಧ ಕಾರ್ಮಿಕರಿಗೆ ಸೌಲಭ್ಯ ನೀಡುವ ಸಂದರ್ಭದಲ್ಲಿ ಅಧಿಕಾರಿಗಳು ಅವ್ಯವಹಾರ ನಡೆಸಿದ್ದಾರೆ. ಆದ್ದರಿಂದ ಸೂಕ್ತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ನವ ಕಲ್ಯಾಣ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘದ ಸದಸ್ಯರು ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು.

ಕಾರ್ಮಿಕ ಅಧಿಕಾರಿಗಳು ಹಾಗೂ ಸಿಬ್ಬಂದಿ 2012ರಿಂದ ಕಟ್ಟಡ ಕಾರ್ಮಿಕ ಫಲಾನುಭವಿಗಳಿಗೆ ಮದುವೆ ಸಹಾಯಧನ, ಹೆರಿಗೆ ಸಹಾಯಧನ ಮತ್ತು ಶೈಕ್ಷಣಿಕ ಸಹಾಯಧನ ಅರ್ಜಿಗಳ ಮಂಜೂರಾತಿಗಾಗಿ ಫಲಾನುಭವಿಗಳಿಂದ ಹಣ ಪಡೆದುಕೊಳ್ಳುತ್ತಾರೆ ಮತ್ತು ಕೋವಿಡ್–19 ಸಂದರ್ಭದಲ್ಲಿ ಕಟ್ಟಡ ಕಾರ್ಮಿಕರ ಫಲಾನುಭವಿಗಳಿಗೆ ಪರಿಹಾರ ಮೊತ್ತವನ್ನು ₹ 5 ಸಾವಿರ ಮತ್ತು ₹ 3 ಸಾವಿರ ಹಣವನ್ನು ಕೊಡುತ್ತಿರುವ ಸಮಯದಲ್ಲಿ ಫಲಾನುಭವಿಗಳ ಖಾತೆಗೆ ನೇರವಾಗಿ ಜಮೆ ಮಾಡಲು ಲಕ್ಷಾಂತರ ಹಣವನ್ನು ಬ್ರೋಕರ್‌ಗಳ ಮೂಲಕ ಹಣವನ್ನು ಪಡೆದುಕೊಂಡಿರುತ್ತಾರೆ ಎಂದು ಮನವಿಯಲ್ಲಿ ದೂರಿದ್ದಾರೆ.

2013ರಿಂದ ಇಲ್ಲಿಯ ತನಕ ಆಫ್‌ಲೈನ್ ಮತ್ತು ಆನ್‌ಲೈನ್ ಅರ್ಜಿಗಳ ದಾಖಲೆಗಳನ್ನು ಮತ್ತು ಇಲ್ಲಿಯವರೆಗೂ ಎಷ್ಟು ಕಿಟ್‌ಗಳನ್ನು ಹಂಚಲಾಗಿದೆ ಮತ್ತು ಯಾವ ಆಧಾರದ ಮೇಲೆ ಹಂಚಿಕೆ ಮಾಡಲಾಗಿದೆ ಎಂಬುದು ಲೋಕಾಯುಕ್ತರ ತನಿಖೆಗೆ ಒಳಪಡಿಸಬೇಕು ಮತ್ತು ಭ್ರಷ್ಟರನ್ನು ಕೂಡಲೇ ಪದಚ್ಯುತಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸಂಘದ ಅಧ್ಯಕ್ಷ ಭೀಮರಾಯ ಎಂ.ಕಂದಳ್ಳಿ, ಪ್ರಧಾನ ಕಾರ್ಯದರ್ಶಿ ಮರೆಪ್ಪ ಎಚ್. ರೋಟನಡಗಿ, ಉಪಾಧ್ಯಕ್ಷ ಶಿವಕುಮಾರ ಬೆಳಗೇರಿ, ಮಹಾಂತೇಶ ದೊಡ್ಡಮನಿ, ಮುತ್ತಣ್ಣ ರಾಜಾಪೂರ, ಶರಣಪ್ಪ ಬಳಿಚಕ್ರ, ಚಂದ್ರಕಾಂತ ತುಪ್ಪದಕರ್, ದೇವಿಂದ್ರ ಉಳ್ಳಾಗಡ್ಡಿ, ಬಾಬುರಾವ ದೇವರಮನಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.