ಆಳಂದ: ಯುವಕರು ಸೋಮಾರಿಗಳಾಗದೆ ಜೀವನದಲ್ಲಿ ಉತ್ತಮ ಸಾಧನೆ ಮೂಲಕ ಸಮಾಜಕ್ಕೆ ಕೊಡುಗೆ ನೀಡಲು ಕ್ರಿಯಾಶೀಲತೆ ಬೆಳೆಸಿಕೊಳ್ಳಬೇಕು ಎಂದು ಕಲಬುರಗಿ ಶರಣಬಸವೇಶ್ವರ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆ ಮುಖ್ಯಸ್ಥ ಕಲ್ಯಾಣರಾವ ಪಾಟೀಲ ತಿಳಿಸಿದರು.

ತಾಲ್ಲೂಕಿನ ಮಾದನ ಹಿಪ್ಪರಗಿ ಗ್ರಾಮದಲ್ಲಿನ ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ, ವಿವಿಧ ಶೈಕ್ಷಣಿಕ ಘಟಕಗಳ ಕಾರ್ಯ ಚಟುವಟಿಕೆಗಳ ಉದ್ಘಾಟನೆ ಹಾಗೂ ಸಾಧಕರ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಮೊಬೈಲ್ ಬಳಕೆಯು ಹೆಚ್ಚಿದಂತೆ ಓದುವ, ಬರೆಯುವ ಹವ್ಯಾಸ ಕಡಿಮೆಯಾಗಿದೆ. ಉತ್ತಮ ಹವ್ಯಾಸಗಳು ಮಾತ್ರ ವಿದ್ಯಾರ್ಥಿಗಳನ್ನು ಉನ್ನತ ಸಾಧನೆಗೆ ಪ್ರೇರಣೆ ನೀಡಲಿವೆ. ಗ್ರಾಮೀಣ ಭಾಗದ ಹೆಣ್ಣುಮಕ್ಕಳು ಇಂದಿನ ಶೈಕ್ಷಣಿಕ ಸೌಲಭ್ಯಗಳು ಸದ್ಬಳಕೆ ಮಾಡಿಕೊಳ್ಳಲು ತಿಳಿಸಿದರು.

ಸಾಹಿತಿ ಶಿವರಾಜ ಶಾಸ್ತ್ರಿ ಹೆರೂರು ಮಾತನಾಡಿದರು.

ಸ್ಥಳೀಯ ವಿರಕ್ತಮಠದ ಪೀಠಾಧಿಪತಿ ಅಭಿನವ ಶಿವಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಪ್ರಾಂಶುಪಾಲ ಬಸವಂತರಾವ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಗುಲಬರ್ಗಾ ವಿವಿಯಿಂದ ಪಿಎಚ್ಡಿ ಪದವಿ ಪಡೆದ ಪ್ರಾಧ್ಯಾಪಕ ಶಂಕರ ಸೂರೆ, ಸಹ ಪ್ರಾಧ್ಯಾಪಕರಾಗಿ ಪದೋನ್ನತಿ ಪಡೆದ ಶ್ರವಣ ಕಾಂಬಳೆ, ಗೋದಾವರಿ ಪಾಟೀಲ ಹಾಗೂ ವರ್ಗಾವಣೆಗೊಂಡ ಪ್ರಾಧ್ಯಾಪಕ ಬಸಣ್ಣ ಶೆಟ್ಟಿ, ಉಮರ್ ಸಾಹೇಬ, ಶರಣಪ್ಪ ಮತ್ತು ಪ್ರತಿಭಾವಂತ ವಿದ್ಯಾರ್ಥಿ ಭಾಗೇಶ ದಡೂತಿ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಪ್ರಾಧ್ಯಾಪಕರಾದ ಪರಶುರಾಮ, ಬಸಪ್ಪ ಹರಿಜನ, ಶಿವಕುಮಾರ, ವಿಜಯಲಕ್ಷ್ಮಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.