ವಾಡಿ (ಕಲಬುರಗಿ ಜಿಲ್ಲೆ): ಚಿತ್ತಾಪುರ ತಾಲ್ಲೂಕಿನ ಗ್ರಾಮವೊಂದರಲ್ಲಿ ಅಪ್ರಾಪ್ತ ಪ್ರೇಮಿಗಳು ಮಂಗಳವಾರ ಸಂಜೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ತಾಲ್ಲೂಕಿನ ಅಕ್ಕಪಕ್ಕದ ಗ್ರಾಮಗಳಲ್ಲಿ ವಾಸಿಸುತ್ತಿದ್ದ, ಐಟಿಐ ಓದುತ್ತಿದ್ದ 17 ವರ್ಷದ ಬಾಲಕ ಹಾಗೂ 8ನೇ ತರಗತಿಯಲ್ಲಿ ಓದುತ್ತಿರುವ 15 ವರ್ಷದ ಬಾಲಕಿ ಪರಸ್ಪರ ಪ್ರೀತಿಸುತ್ತಿದ್ದರು. ವಿಷ ಕುಡಿಯುವ ಮುನ್ನ ಬಾಲಕ, ತನ್ನ ತಾಯಿಗೆ ಫೋನ್ ಮಾಡಿ, ‘ನಾವಿಬ್ಬರು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ. ನಮ್ಮನ್ನು ಹುಡುಕಬೇಡಿ’ ಎಂದು ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಫೊನ್ ಕರೆಯ ಬಳಿಕ ಕುಟುಂಬಸ್ಥರು ಹುಡುಕಾಡಿದ್ದಾರೆ. ತಡರಾತ್ರಿ ತಾಂಡಾವೊಂದರ ಸಮೀಪದ ಯಲ್ಲಮ್ಮ ದೇವಿ ದೇವಸ್ಥಾನದ ಬಳಿ ಇಬ್ಬರು ಬಿದ್ದು ಒದ್ದಾಡುತ್ತಿದ್ದರು. ಬಾಯಿಯಲ್ಲಿ ನೊರೆ ಬರುತ್ತಿತ್ತು. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಕಲಬುರಗಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟರು ಎಂದು ಸ್ಥಳೀಯರು ಹೇಳಿದರು.

ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.