ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Karnataka Rains | ಸೇಡಂ: ಮಳೆಗೆ ಧರೆಗುರುಳಿದ ಐತಿಹಾಸಿಕ ಮಳಖೇಡ ಕೋಟೆ

Published : 31 ಆಗಸ್ಟ್ 2024, 6:17 IST
Last Updated : 31 ಆಗಸ್ಟ್ 2024, 6:17 IST
ಫಾಲೋ ಮಾಡಿ
Comments

ಸೇಡಂ (ಕಲಬುರಗಿ ಜಿಲ್ಲೆ): ತಾಲ್ಲೂಕಿನ ಮಳಖೇಡ ಗ್ರಾಮದ ಐತಿಹಾಸಿಕ ಕೋಟೆ ಶುಕ್ರವಾರ ರಾತ್ರಿ ಸುರಿದ ಮಳೆಗೆ ಧರೆಗುರುಳಿದೆ.

ತಾಲ್ಲೂಕಿನಾದ್ಯಂತ ಕಳೆದೆರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೋಟೆಯ ಗೋಡೆಗಳಲ್ಲಿ ನೀರು ನಿಂತಿದೆ. ಶುಕ್ರವಾರ ರಾತ್ರಿಯಿಂದ ಮಳೆ ಆರಂಭಗೊಂಡಿದ್ದು ಶನಿವಾರವೂ ಮಳೆ ಮುಂದುವರೆದಿದೆ.

ನಿಂರತ ಮಳೆಗೆ ಕೋಟೆ ಗೋಡೆಗಳು ತೇವಗೊಂಡಿದ್ದು, ಏಕಾಏಕಿ ನೀರು ಧುಮ್ಮಿಕ್ಕಿ ಬರುವಂತೆ ಕೋಟೆ ದಿಢೀರ್ ಕುಸಿದಿದೆ. ಇದರಿಂದ ಪಕ್ಕದಲ್ಲಿದ್ದ ನಿವಾಸಿಗಳು ಆತಂಕಗೊಂಡು, ಬೆಚ್ಚಿಬಿದ್ದಿದ್ದಾರೆ. ಕೋಟೆ ಪಕ್ಕದಲ್ಲೇ ಇರುವ ಶೌಚಾಲಯ ಕಡೆ ಮಹಿಳೆಯರು ತೆರಳುತ್ತಿದ್ದರು. ಕೋಟೆ ಬೀಳುವ ಕಲ್ಲಿನ ಶಬ್ದ‌ ಕೇಳಿ ವಾಪಸ್ ಮರಳಿದ್ದಾರೆ. ಅದೃಷ್ಟವಶಾತ್ ಯಾರಿಗೂ ಪ್ರಾಣ ಹಾನಿಯಾಗಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.

ಜೀರ್ಣೋದ್ಧಾರಗೊಂಡ ಕೋಟೆಯೇ ಬಿತ್ತು: ರಾಷ್ಟ್ರಕೂಟರ ಕಾಲದಲ್ಲಿ ನಿರ್ಮಿಸಿದ್ದ ಕೋಟೆ ಐತಿಹಾಸಿಕವಾಗಿ ಮಹತ್ವ ಪಡೆದುಕೊಂಡಿದೆ. ರಾಷ್ಟ್ರಕೂಟರ ರಾಜ ಅಮೋಘವರ್ಷ ನೃಪತುಂಗ ಮಳಖೇಡ (ಮಾನ್ಯಖೇಟ) ರಾಜಧಾನಿಯನ್ನಾಗಿ ಮಾಡಿಕೊಂಡಿದ್ದರು.

ಆಸ್ಥಾನದಲ್ಲಿದ್ದ ಕವಿ ಶ್ರೀವಿಜಯ 'ಕವಿರಾಜ ಮಾರ್ಗ' ಗ್ರಂಥ ಬರೆದಿದ್ದ. ಇದು ಕನ್ನಡದ ಮೊದಲ ಉಪಲಬ್ದ ಕೃತಿಯಾಗಿದೆ. ಇಂತಹ ಐತಿಹಾಸಿಕ ಚರೀತ್ರೆಯುಳ್ಳ‌ ಮಳಖೇಡ ಕೋಟೆಯನ್ನು 2016-18ರ ಅವಧಿಯಲ್ಲಿ ಅಂದಿನ ಸಚಿವರಾಗಿದ್ದ ಡಾ.ಶರಣಪ್ರಕಾಶ ಪಾಟೀಲ ಅವರು ₹5 ಕೋಟಿ‌ ಅನುದಾನ ನೀಡಿ ಜೀರ್ಣೋದ್ಧಾರ ಮಾಡಿಸಿದ್ದರು. ಜೊತೆಗೆ ಆಗಿನ ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ಅವರು ₹1 ಕೋಟಿ ಅನುದಾನ ನೀಡಿದ್ದರು.

2018ರಲ್ಲಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಪಾಟೀಲ ಅವರ ನೇತೃತ್ವದಲ್ಲಿ ಕೋಟೆ ಜೀರ್ಣೋದ್ಧಾರದ ಜೊತೆಗೆ ಸರ್ಕಾರದಿಂದ ರಾಷ್ಟ್ರಕೂಟರ ಉತ್ಸವ ಜರುಗಿತು. ಹಳೆ ಗೋಡೆಗಳು ಬಿದ್ದಿಲ್ಲ. ಆದರೆ,ಜೀರ್ಣೋದ್ಧಾರ ಮಾಡಿದ ಗೋಡೆಯೇ ಬಿದ್ದಿದ್ದು, ಜನರಲ್ಲಿ ಅಚ್ಚರಿ ಮೂಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT