ಕಲಬುರ್ಗಿ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಏರುಗತಿಯಲ್ಲಿರುವುದರಿಂದ ನಗರ ಪ್ರದೇಶದಲ್ಲಿ ಇದೇ ಏಪ್ರಿಲ್ 10ರಿಂದ 20ರವರೆಗೆ ಪ್ರತಿ ದಿನ ರಾತ್ರಿ 10ರಿಂದ ಬೆಳಿಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಹೇರಲಾಗಿದೆ. ಇದಕ್ಕೆ ಪೂರಕವಾಗಿ ಪೊಲೀಸ್ ಕಮಿಷನರ್ ಎನ್. ಸತೀಶಕುಮಾರ್ ಅವರು ಸೆಕ್ಷನ್ 144 ಅನ್ವಯ ನಗರ ಪ್ರದೇಶದ ವ್ಯಾಪ್ತಿಯಲ್ಲಿ ಈ ಅವಧಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

ಈ ಸಂದರ್ಭದಲ್ಲಿ ಯಾವುದೇ ವಾಣಿಜ್ಯ ವಹಿವಾಟನ್ನು ನಡೆಸುವಂತಿಲ್ಲ. ತುರ್ತು ಸೇವೆಗಳನ್ನು ಹೊರತುಪಡಿಸಿ ಉಳಿದ ಯಾವುದೇ ಚಟುವಟಿಕೆಗಳನ್ನು ನಡೆಸಲು ಅನಮತಿ ಇಲ್ಲ.

ಆದರೆ, ವಿವಿಧ ಆರೋಗ್ಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಮತ್ತು ಅವರ ಸಹಾಯಕರಿಗೆ ವೈದ್ಯಕೀಯ ಸೇವೆಗಳಿಗಾಗಿ ಸಂಚಾರಕ್ಕಾಗಿ ಅನುಮತಿಸಲಾಗಿದೆ. ರಾತ್ರಿ ಪಾಳಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲ್ಲ ಕಾರ್ಖಾನೆಗಳು, ಕಂಪನಿಗಳು, ಸಂಸ್ಥೆಗಳು ಯಥಾರೀತಿ ಕಾರ್ಯನಿರ್ವಹಿಸಲು ಅನುಮತಿಸಿದೆ. ಆದರೆ, ಸಂಬಂಧಿಸಿದ ಕಾರ್ಮಿಕರು, ನೌಕರರು ಕೊರೊನಾ ಕರ್ಫ್ಯೂ ಅವಧಿಗೆ ಮುನ್ನವೇ ಕರ್ತವ್ಯದಲ್ಲಿ ಹಾಜರಿರಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಅತ್ಯವಶ್ಯಕ ಸೇವೆಗಳನ್ನು ಒದಗಿಸುವಂತಹ ವಾಹನಗಳು, ಸರಕು ಸಾಗಾಣಿಕ ವಾಹನಗಳು ಮತ್ತು ಖಾಲಿ ವಾಹನಗಳ ಸಂಚಾರಕ್ಕೆ ಮಾತ್ರ ಅನುಮತಿಸಿದೆ. ರಾತ್ರಿ ವೇಳೆಯಲ್ಲಿನ ಬಸ್ಸು, ರೈಲು ಹಾಗೂ ವಿಮಾನದ ದೂರ ಪ್ರಯಾಣ ಮಾಡಬಹುದು. ಪ್ರಯಾಣಿಕರು ಮನೆಯಿಂದ ನಿಲ್ದಾಣಗಳಿಗೆ ಮತ್ತು ನಿಲ್ದಾಣಗಳಿಂದ ಮನೆಗೆ ಅಧಿಕೃತ ಟಿಕೆಟ್ಗಳ ಆಧಾರದ ಮೇಲೆ ಆಟೊ, ಕ್ಯಾಬ್ ಮೂಲಕ ಸಂಚರಿಸಲು ಅನುಮತಿ ನೀಡಲಾಗಿದೆ ಎಂದು ಸತೀಶಕುಮಾರ್ ಆದೇಶದಲ್ಲಿ ವಿವರಿಸಿದ್ದಾರೆ.

ರಾತ್ರಿ 10 ಗಂಟೆಯಾಗುತ್ತಿದ್ದಂತೆಯೇ ಪೊಲೀಸರು ವಾಣಿಜ್ಯ ಚಟುವಟಿಕೆಗಳನ್ನು ಸ್ಥಗಿತಗೊಳಿಸುವಂತೆ ಸೂಚಿಸಿದರು. ಪೊಲೀಸರು ವೃತ್ತದಲ್ಲಿ ಅನಗತ್ಯವಾಗಿ ಸಂಚರಿಸುತ್ತಿದ್ದ ಜನರಿಗೆ ರಾತ್ರಿ ಕರ್ಫ್ಯೂ ಇರುವ ಬಗ್ಗೆ ತಿಳಿವಳಿಕೆ ನೀಡಿ ಮನೆಗೆ ಕಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.