ಆಳಂದ (ಕಲಬುರಗಿ ಜಿಲ್ಲೆ): ತಾಲ್ಲೂಕಿನ ಗ್ರಾಮವೊಂದರ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣ ಸಂಬಂಧ ಕಾನೂನು ಸಂಘರ್ಷಕ್ಕೆ ಒಳಪಟ್ಟ ಒಬ್ಬ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

‘ಅದೇ ಗ್ರಾಮದ 16 ವರ್ಷದ ಬಾಲಕ ಬಯಲು ಬಹಿರ್ದೆಸೆಗೆ ಹೋಗಿದ್ದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿದ್ದು ವಿಚಾರಣೆಯಲ್ಲಿ ತಿಳಿದು ಬಂದಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್ ‘ಪ್ರಜಾವಾಣಿ’ಗೆ ತಿಳಿಸಿದರು.

‘ಎಸ್ಸೆಸ್ಸೆಲ್ಸಿ ಪೂರ್ಣಗೊಳಿಸಿದ್ದ ಬಾಲಕ ಮೊಬೈಲ್ ಫೋನ್‌ನಲ್ಲಿ ಎಲ್ಲಾ ತರಹದ ವಿಡಿಯೊಗಳನ್ನು ನೋಡುತ್ತಿದ್ದ. ಬಯಲು ಬಹಿರ್ದೆಸೆಗೆ ಹೋಗುತ್ತಿದ್ದ ಬಾಲಕಿಯನ್ನು ಬಲವಂತವಾಗಿ ಎತ್ತಿಕೊಂಡು ಹೋಗಿ ಅತ್ಯಾಚಾರ ಎಸಗಿ, ಕೊಲೆ ಮಾಡಿದ್ದಾಗಿ ವಿಚಾರಣೆಯಲ್ಲಿ ಒಪ್ಪಿದ್ದಾನೆ. ವೈದ್ಯಕೀಯ ತಪಾಸಣೆಗೆ ಒಳಪಡಿಸಿದ ಬಳಿಕ ಆತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.