ಕಲಬುರ್ಗಿ: ಯುವರತ್ನ ಚಲನಚಿತ್ರದ ಪ್ರಚಾರಕ್ಕಾಗಿ ನಗರದ ಶರಣಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲು ಬರುತ್ತಿರುವ ಚಿತ್ರ ನಟ ಪುನೀತ್ ರಾಜಕುಮಾರ್ ಅವರನ್ನು ಕಾಣಲು ಬಂದ ಅಭಿಮಾನಿಗಳಿಗೆ ಪೊಲೀಸರು ಲಾಠಿ ರುಚಿ ತೋರಿಸಿದರು.

ಶ್ರೀಮಠದ ಎದುರಿಗೆ ಇರುವ ರಸ್ತೆಯ ಪಕ್ಕದಲ್ಲಿ ನಿಂತಿರುವ ಯುವಕ-ಯುವತಿಯರಿಗೆ ಪೊಲೀಸರು ಲಾಠಿ ಬೀಸಿದರು. ಇದರಿಂದ ಅಲ್ಲಿದ್ದವರು ಕಂಗಾಲಾಗಿ ಓಡಿ ಹೋದರು.

ಚಿತ್ರದ ಪ್ರಚಾರಕ್ಕಾಗಿ ನಗರದ ಏಷಿಯನ್ ಮಾಲ್ ಬಳಿ ಶಾಮಿಯಾನ ಹಾಕಲಾಗಿತ್ತು. ಆದರೆ ಕೊರೊನಾ ಸೋಂಕು ಹರಡುತ್ತಿರುವುದರಿಂದ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರು ಕಾರ್ಯಕ್ರಮಕ್ಕೆ ಅನುಮತಿ ನೀಡಿಲ್ಲ.

ಇದರಿಂದಾಗಿ ಚಿತ್ರನಟ ಪುನೀತ್ ರಾಜಕುಮಾರ್ ಹಾಗೂ ಚಿತ್ರ ತಂಡ ದೇವಸ್ಥಾನಕ್ಕೆ ಭೇಟಿ ನೀಡಿ ಡಾ. ಶರಣಬಸವಪ್ಪ ಅಪ್ಪ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.