ಕಲಬುರಗಿ: ‘ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧದ ಪೋಕ್ಸೊ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಅಕ್ರಮ ಆಸ್ತಿ ಪ್ರಕರಣದಲ್ಲಿ ಬಿಜೆಪಿಗರ ನಿಲುವು ಏನು’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.

ನಗರದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಬಿಜೆಪಿಗರು ತಮ್ಮ ಒಳಗಿನ ಅಸಮರ್ಥ ನಾಯಕತ್ವ ಮುಚ್ಚಿ ಹಾಕಿಕೊಳ್ಳಲು ಮುಡಾ, ವಾಲ್ಮೀಕಿ ನಿಗಮ ಮಂಡಳಿ ಮುಂದಿಟ್ಟುಕೊಂಡು ಪ್ರಚಾರ ಮಾಡುತ್ತಿದ್ದಾರೆ. ತಮ್ಮದೇ ನಾಯಕರ ವಿರುದ್ಧದ ಪ್ರಕರಣಗಳ ಬಗೆಗಿನ ತಮ್ಮ ನಿಲುವನ್ನು ಬಹಿರಂಗಪಡಿಸಲಿ’ ಎಂದು ಸವಾಲು ಹಾಕಿದರು.

‘ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣವನ್ನು ಕಾನೂನಾತ್ಮಕವಾಗಿ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳುತ್ತಿದ್ದಾರೆ. ಆದರೆ, ನ್ಯಾಯಾಲಯದ ಮೇಲೆ ಯಾರ ಒತ್ತಡ ಇದೆ? ಮುಖ್ಯಮಂತ್ರಿಗಳು ಪಟ್ಟಿ ನೀಡಿದ 21 ಪ್ರಕರಣಗಳ ಬಗ್ಗೆ ಏಕೆ ಆಸಕ್ತಿ ತೋರುತ್ತಿಲ್ಲ’ ಎಂದು ಕೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.