ಕಲಬುರಗಿ: ಸ್ನಾತಕೋತ್ತರ ಪದವಿ ಪಡೆದ ಪ್ರೌಢಶಾಲಾ ಶಿಕ್ಷಕರಿಗೆ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ ಅವರು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಕಾಲಕಾಲಕ್ಕೆ ಸರಿಯಾದ ಸಮಯದಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ ವೃಂದ ಮತ್ತು ನೇಮಕಾತಿ ನಿಯಮಗಳ ಅನ್ವಯ ಪ್ರೌಢಶಾಲೆಯ ಸ್ನಾತಕೋತ್ತರ ಪದವಿ ಪಡೆದ ಶಿಕ್ಷಕರಿಗೆ ಶೇಕಡ 50ರಷ್ಟು ಬಡ್ತಿ ಮೂಲಕ ಹುದ್ದೆಗಳನ್ನು ತುಂಬಲಾಗುತ್ತಿತ್ತು. ಆದರೆ ಕಳೆದ 13 ವರ್ಷಗಳಿಂದ ಬಡ್ತಿ ಪ್ರಕ್ರಿಯೆ ಸ್ಥಗಿತಗೊಂಡಿದೆ’ ಎಂದು ಹೇಳಿದ್ದಾರೆ.

‘ತಕ್ಷಣ ಪ್ರಕ್ರಿಯೆ ಪ್ರಾರಂಭಿಸಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ ಬಡ್ತಿ ನೀಡಿ ಸ್ಥಳ ನಿಯುಕ್ತಿಗೊಳಿಸುವುದರ ಮೂಲಕ ಶೈಕ್ಷಣಿಕ ಪ್ರಗತಿಗೆ ಪೂರಕವಾಗುವ ಅವಕಾಶ ಕಲ್ಪಿಸಬೇಕು’ ಎಂದು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.