ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಆಳಂದ: ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ಪ್ರತಿಭಟನೆ

Published : 27 ಆಗಸ್ಟ್ 2024, 14:27 IST
Last Updated : 27 ಆಗಸ್ಟ್ 2024, 14:27 IST
ಫಾಲೋ ಮಾಡಿ
Comments

ಆಳಂದ: ಪಶ್ಚಿಮ ಬಂಗಾಳದಲ್ಲಿ ಈಚೆಗೆ ನಡೆದ ಅತ್ಯಚಾರ, ಕೊಲೆ ಪ್ರಕರಣ ಖಂಡಿಸಿ ಪಟ್ಟಣದಲ್ಲಿ ಮಂಗಳವಾರ ದಲಿತ ಸೇನೆ ರಾಮ ವಿಲಾಸ ತಾಲ್ಲೂಕು ಸಮಿತಿ ವತಿಯಿಂದ ಪ್ರತಿಭಟನೆ ಮಾಡಲಾಯಿತು. ಪಟ್ಟಣದ ಬಸ್‌ ನಿಲ್ದಾಣದ ಮುಂಭಾಗದಲ್ಲಿ ರಸ್ತೆ ಸಂಚಾರ ತಡೆದು ಪ್ರತಿಭಟಿಸಲಾಯಿತು.

ಸಂಘಟನೆಯ ತಾಲ್ಲೂಕು ಘಟಕದ ಅಧ್ಯಕ್ಷ ಧರ್ಮಾ ಬಂಗರಗಾ ಮಾತನಾಡಿ, ‘ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ತಕ್ಷಣ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿ, ಗಲ್ಲು ಶಿಕ್ಷೆ ವಿಧಿಸಬೇಕು’ ಎಂದು ಒತ್ತಾಯಿಸಿದರು.

ಹೋರಾಟಗಾರ ಮಲ್ಲಿಕಾರ್ಜುನ ಬೋಳಣಿ ಮಾತನಾಡಿ, ‘ಶಾಲೆ, ಕಾಲೇಜು, ವಸತಿ ನಿಲಯಗಳು, ಕಾರ್ಖಾನೆ ಹಾಗೂ ಆಸ್ಪತ್ರೆ ಸೇರಿ ವಿವಧೆಡೆ ಮಹಿಳೆಯರು ಇರುವ ಸ್ಥಳದಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಬೇಕು. ಹೆಣ್ಣುಮಕ್ಕಳಿಗೆ ಸೂಕ್ತ ಭದ್ರತೆ ಒದುಗಿಸಬೇಕು’ ಎಂದು ಆಗ್ರಹಿಸಿದರು.

ಹೋರಾಟಗಾರರಾದ ಜೈಭೀಮ ಕಂಟೇಕುರೆ, ದಿಲೀಪ ಮಟಕಿ, ರೇವಣಸಿದ್ದ ಮಂಡೆ, ಶರಣು ನರೋಣೆ, ಲಕ್ಷ್ಮಣ ಸಂಗೋಳಗಿ, ಪಿಂಟು ಸಾಲೇಗಾಂವ, ಕಾರ್ತಿಕ ಸನಗುಂದಾ, ಅಶೋಕ ಸಿಂಗೆ, ಮಹಾದೇವ ಕಾಂಬಳೆ, ಪ್ರಕಾಶ ಕಾಂಬಳೆ ಭಾಗವಹಿಸಿದ್ದರು.

ಗ್ರೇಡ್‌ 2 ತಹಶೀಲ್ದಾರ್‌ ಭೀಮಾಶಂಕರ ಕುದುರಿ ಮನವಿ ಪತ್ರ ಸ್ವೀಕರಿಸಿದರು. ಡಿವೈಎಸ್‌ಪಿ ಗೋಪಿ, ಸಿಪಿಐ ಪ್ರಕಾಶ ಯಾತನೂರು, ಪಿಎಸ್‌ಐ ಭೀಮಾಶಂಕರ ಬಂಕ್ಲಿ ಹಾಜರಿದ್ದರು.

ದಲಿತ ಸೇನೆ ಕಾರ್ಯಕರ್ತರು ಹಾಗೂ ಕಾಲೇಜು ವಿದ್ಯಾರ್ಥಿನಿಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT