ಕಲಬುರಗಿ: ಮೈಸೂರಿನ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಕುಲಪತಿಯಾಗಿದ್ದ ಹಿರಿಯ ಸಂಗೀತ ಕಲಾವಿದ ಪ್ರೊ. ಹನುಮಣ್ಣ ನಾಯಕ ದೊರೆ (69) ಅವರು ನಗರದ ಬಸವೇಶ್ವರ ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಗಿನ ಜಾವ ನಿಧನರಾದರು.

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಕೆಲ ಕಾಲದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಚಂದ್ರಶೇಖರ ಕಂಬಾರ ಅವರು ಹಂಪಿ ಕನ್ನಡ ವಿ.ವಿ. ಕುಲಪತಿಯಾಗಿದ್ದ ಅವಧಿಯಲ್ಲಿ ಹನುಮಣ್ಣ ನಾಯಕ ದೊರೆ ಅವರನ್ನು ಪ್ರಾಧ್ಯಾಪಕರನ್ನಾಗಿ ನೇಮಕ ಮಾಡಿಕೊಂಡಿದ್ದರು. ನಂತರ ಡಾ.ಗಂಗೂಬಾಯಿ ಹಾನಗಲ್ ಸಂಗೀತ ವಿ.ವಿ. ಕುಲಪತಿಯಾಗಿದ್ದರು. ನಂತರ ಹಂಪಿ ವಿ.ವಿ.ಗೆ ವಾಪಸಾಗಿ ಸೇವೆಯಿಂದ ನಿವೃತ್ತರಾಗಿದ್ದರು.

ಕೆಲ ಕಾಲ ಕಲಬುರಗಿಯ ಡಾ.ಶರಣಬಸವಪ್ಪ ಅಪ್ಪ ವಿಶ್ವವಿದ್ಯಾಲಯದ ಸಂಗೀತ ವಿಭಾಗದ ಮುಖ್ಯಸ್ಥರಾಗಿದ್ದರು.

ಅವರಿಗೆ ಇಬ್ಬರು ಪತ್ನಿಯರು, ನಾಲ್ವರು ಪುತ್ರರು, ಪುತ್ರಿ ಇದ್ದಾರೆ.

ಮಧ್ಯಾಹ್ನದವರೆಗೆ ನಗರದ ಪ್ರಶಾಂತ ನಗರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಇಂದು ಸಂಜೆ 4ಕ್ಕೆ ಸ್ವಗ್ರಾಮ ರಾಯಚೂರು ಜಿಲ್ಲೆ ದೇವದುರ್ಗ ತಾಲ್ಲೂಕಿನ ತೆಗ್ಗಿಹಾಳ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.