ಕಲಬುರಗಿ: ‘ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಅಕ್ರಮಗಳ ತನಿಖೆಯನ್ನು ರಾಜ್ಯ ಸರ್ಕಾರ ಸಿಬಿಐಗೆ ಶಿಫಾರಸು ಮಾಡಬೇಕು’ ಎಂದು ಕಲ್ಯಾಣ ಕರ್ನಾಟಕ 371(ಜೆ) ಕಲಂ ಕಾನೂನು ತಿದ್ದುಪಡಿ ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಸೈಬಣ್ಣಾ ಜಮಾದಾರ ಆಗ್ರಹಿಸಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿ ಸರ್ಕಾರದ ಅವಧಿಯಲ್ಲಿನ ಕೆಕೆಆರ್ಡಿಬಿ ಮತ್ತು ಕಲ್ಯಾಣ ಕರ್ನಾಟಕ ಸಂಘದ ಅಕ್ರಮಗಳ ತನಿಖಾ ವರದಿಯನ್ನು ಬಹಿರಂಗ ಪಡಿಸದ ಕಾಂಗ್ರೆಸ್ ಸರ್ಕಾರ ಪ್ರಕರಣ ಮುಚ್ಚಿಹಾಕುತ್ತಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ನಮ್ಮ ಭಾಗದ ಜನರ ಕಣ್ಣಿಗೆ ಮಣ್ಣೆರಚಲು ಈಗ ಮತ್ತೆ ತನಿಖಾ ಅಧಿಕಾರಿಯನ್ನು ನೇಮಕ ಮಾಡಿ ಕಾಲಹರಣ ಮಾಡುತ್ತಿದೆ. ಅವರಿಗೆ ಪ್ರತಿ ತಿಂಗಳು ₹1.50 ಲಕ್ಷ ವೇತನ, ಭತ್ಯೆ ಮತ್ತಿತರ ಸೌಲಭ್ಯಗಳನ್ನು ನೀಡುವ ಮೂಲಕ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಲು ಹೊರಟಿದೆ’ ಎಂದರು.

‘ಹಿಂದೆ ಬಿಜೆಪಿಯನ್ನು ಶೇ 40 ಪರ್ಸೆಂಟೇಜ್ ಸರ್ಕಾರ ಎಂದು ಆಪಾದನೆ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಆದರೆ, ಅಕ್ರಮಕ್ಕೆ ಸಾಥ್ ನೀಡಿದ ಅಧಿಕಾರಿಗಳನ್ನೇ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಕೆಕೆಆರ್ಡಿಬಿ ಅಧ್ಯಕ್ಷ ಡಾ.ಅಜಯ್ಸಿಂಗ್ ತಮ್ಮ ಪಿಎಸ್ ಆಗಿ ನೇಮಿಸಿಕೊಂಡಿರುವುದು ಯಾಕೆ’ ಎಂದು ಪ್ರಶ್ನಿಸಿದರು.

‘ಕೆಕೆಆರ್ಡಿಬಿಯಲ್ಲಿ ಪಿಎಸ್ಒ ನೇಮಕ ಮಾಡಿ ₹9.97 ಕೋಟಿ ಅವ್ಯವಹಾರ ನಡೆಸಲಾಗಿದೆ. ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ, ಬೆಂಗಳೂರಿನಲ್ಲಿ ಹಾಸ್ಟೆಲ್ ಹೆಸರಿನಲ್ಲಿ ಭ್ರಷ್ಟಾಚಾರ ನಡೆದಿದೆ. ಈ ಪ್ರಕರಣಗಳ ತನಿಖೆಯನ್ನು ವಾರದಲ್ಲಿ ಸಿಬಿಐಗೆ ವಹಿಸದಿದ್ದಲ್ಲಿ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಸಿದರು.

ಯಶವಂತರಾವ ಸೂರ್ಯವಂಶಿ, ವಿಜಯಕುಮಾರ ಮಠಪತಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.