ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಹುಲ್ಲೂರು ಗ್ರಾಮದ ಬಳಿ ಭೀಮಾ ನದಿಯಿಂದ ಅಕ್ರಮ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಅಡ್ಡಗಟ್ಟಲು ಮುಂದಾದ ನೆಲೋಗಿ ಠಾಣೆ ಕಾನ್‌ಸ್ಟೆಬಲ್ ಮಯೂರ ಚವ್ಹಾಣ (51) ಮೇಲೆ ಟ್ರ್ಯಾಕ್ಟರ್ ಹಾಯ್ದು ಅವರು ಮೃತಪಟ್ಟಿದ್ದಾರೆ.

ಗುರುವಾರ ರಾತ್ರಿ ಘಟನೆ ನಡೆದಿದ್ದು, ಎಸ್ಪಿ ಇಶಾ ಪಂತ್ ಅವರು ಆರೋಪಿಗಳ ಪತ್ತೆಗೆ ತನಿಖಾ ತಂಡ ರಚಿಸಿದ್ದರು.

ಮರಳು ಅಕ್ರಮ ಸಾಗಾಟ ಮಾಡುತ್ತಿದ್ದುದನ್ನು ತಡೆಯಲು ಹೋದ ಕಾನ್‌ಸ್ಟೆಬಲ್ ಮೇಲೆ ಟ್ರ್ಯಾಕ್ಟರ್ ಹಾಯಿಸಿ ಕೊಲೆ ಮಾಡಿದ್ದ ಆರೋಪದ ಮೇಲೆ ಟ್ರ್ಯಾಕ್ಟರ್ ಚಾಲಕ ನಾರಾಯಣಪುರದ ಸಿದ್ದಪ್ಪ ಕರ್ಜಗಿ ಎಂಬಾತನನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಅಕ್ರಮ ಮರಳು ತಡೆಗೆ ಹುಲ್ಲೂರು ಗ್ರಾಮದ ಬಳಿ ಚೆಕ್ ಪೋಸ್ಟ್ ಹಾಕಲಾಗಿತ್ತು. ಆ ಸಂದರ್ಭದಲ್ಲಿ ಟ್ರ್ಯಾಕ್ಟರ್ ತಪಾಸಣೆ ಮಾಡಲು ಮುಂದಾದಾಗ ಚಾಲಕ ಮಯೂರ ಮೇಲೆ ಹಾಯಿಸಿಕೊಂಡು ಪರಾರಿಯಾಗಿದ್ದ.

ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಘಟನೆಯ ಮಾಹಿತಿ ಪಡೆದಿದ್ದಾರೆ. ಕುಟುಂಬದವರಿಗೆ ಸಾಂತ್ವನ, ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಕರೆ ಮಾಡಿ ಮಾತನಾಡಿದ್ದು, ತನಿಖೆಗೆ ಆದೇಶಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.