ಕಲಬುರಗಿ: ಕಲ್ಯಾಣ ಕರ್ನಾಟಕದಲ್ಲಿ ಶೈಕ್ಷಣಿಕ ಕ್ರಾಂತಿ ಮಾಡಿದ ದಾರ್ಶನಿಕ, ಶಿಕ್ಷಣ ತಜ್ಞರಾದ ಶರಣಬಸವಪ್ಪ ಅಪ್ಪ ಅವರ 90ನೇ ಜನ್ಮದಿನವನ್ನು ನಗರದ ಶರಣಬಸವ ವಿಶ್ವವಿದ್ಯಾಲಯವು ನವೆಂಬರ್ 14ರಂದು ಸಂಭ್ರಮದಿಂದ ಆಚರಿಸಲು ಸಕಲ ಸಿದ್ಧತೆ ಮಾಡಿಕೊಂಡಿದೆ.

ಶಿಕ್ಷಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಅಪ್ಪಾಜಿ ಅವರು, ಈ ಪ್ರದೇಶವನ್ನು ಶೈಕ್ಷಣಿಕವಾಗಿ ಸಬಲೀಕರಣಗೊಳಿಸಲು ಸಿಕ್ಕ ಎಲ್ಲಾ ಅವಕಾಶಗಳನ್ನೂ ಸದ್ಬಳಕೆ ಮಾಡಿಕೊಂಡಿದ್ದಾರೆ. ಕರ್ನಾಟಕ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿದ್ದಾಗ ಗುಲಬರ್ಗಾದಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರವನ್ನು ಸ್ಥಾಪಿಸುವ ಮೂಲಕ ಮನೆ ಬಾಗಿಲಿನಲ್ಲೇ ವಿಶ್ವವಿದ್ಯಾಲಯ ಇರಬೇಕು ಎಂಬ ಜನರ ಕನಸನ್ನು ನನಸಾಗಿಸಲು ಕಾರಣಕರ್ತರಾಗಿದ್ದರು. ನಂತರ ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ಭೂಮಿ ಮತ್ತು ಇತರ ಮೂಲಸೌಕರ್ಯಗಳನ್ನು ಗುರುತಿಸಲು ಸರ್ಕಾರ ರಚಿಸಿದ ಸಮಿತಿಯ ಅಧ್ಯಕ್ಷರಾಗಿದ್ದ ಅಪ್ಪಾಜಿ, ಪ್ರಸ್ತುತ ಸ್ಥಳದಲ್ಲಿ ವಿಶ್ವವಿದ್ಯಾಲಯ ಸ್ಥಾಪನೆಗೆ ಭೂಮಿ ಪೂಜೆ ಮಾಡಿದ್ದರು.

1983ರಲ್ಲಿ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿಯಾಗಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿ ಅಪ್ಪಾಜಿ ಅವರು ಪೀಠಾರೋಹಣ ಮಾಡಿದ ನಂತರ ಈ ಭಾಗದಲ್ಲಿ ಸಂಘವು ಶಿಕ್ಷಣದಲ್ಲಿ ಗುಣಮಟ್ಟದ ಘಟಕವನ್ನು ಪರಿಚಯಿಸಿತು. ಇವರು ಸ್ಥಾಪಿಸಿದ ಶರಣಬಸವೇಶ್ವರ ವಸತಿ ಪಬ್ಲಿಕ್ ಶಾಲೆಯು ಕಲ್ಯಾಣ ಕರ್ನಾಟಕದ ಸಾವಿರಾರು ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣದ ಬಾಗಿಲನ್ನು ತೆರೆದಿಟ್ಟಿತು.

ಅಪ್ಪಾಜಿ ಅವರ ಸಮರ್ಥ ನಾಯಕತ್ವದಲ್ಲಿ ಸಂಘವು ಉನ್ನತ ಶಿಕ್ಷಣದ ಹೊಸ ದಿಗಂತಕ್ಕೆ ಕಾಲಿಟ್ಟಿತು. ಶರಣಬಸವ ವಿಶ್ವವಿದ್ಯಾಲಯವು ಸಂಶೋಧನಾ ಚಟುವಟಿಕೆಗಳಿಗೆ ಹೆಚ್ಚಿನ ಅವಕಾಶವನ್ನು ನೀಡುವ ಮುಖ್ಯ ಶ್ರೇಷ್ಠತೆಯ ಕೇಂದ್ರವಾಗಿ ರೂಪುಗೊಳ್ಳುತ್ತಿದೆ.

ಶರಣಬಸವ ವಿಶ್ವವಿದ್ಯಾಲಯ ಸ್ಥಾಪಿಸುವ ಮುನ್ನಾ ದಿನ ನೀಡಿದ ಸಂದರ್ಶನದಲ್ಲಿ ಅಪ್ಪಾಜಿ ಅವರು, ‘ನಮ್ಮ ವಿಶ್ವವಿದ್ಯಾಲಯದಲ್ಲಿ ನೀಡುವ ಕೋರ್ಸ್ಗಳನ್ನು ಆಕ್ಸ್ಫರ್ಡ್ನಂತಹ ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಮತ್ತು ಪದವಿಪೂರ್ವ ಹಾಗೂ ಸ್ನಾತಕೋತ್ತರ ಹಂತಗಳಲ್ಲಿ ಸಂಶೋಧನೆಯ ಮೇಲೆ ಕೇಂದ್ರೀಕರಿಸುವ ಇತರ ವಿಶ್ವವಿದ್ಯಾಲಯಗಳಲ್ಲಿ ನೀಡುವ ಕೋರ್ಸ್ಗಳ ಮಾದರಿಯಲ್ಲಿ ವಿನ್ಯಾಸಗೊಳಿಸಲಾಗುವುದು’ ಎಂದು ಭರವಸೆ ನೀಡಿದ್ದರು.

‘ಸದ್ಯ ಅಸ್ತಿತ್ವದಲ್ಲಿರುವ ಶಿಕ್ಷಣ ಸಂಸ್ಥೆಗಳಿಗೆ ವಿಶ್ವದರ್ಜೆಯ ತಂತ್ರಜ್ಞರು ಮತ್ತು ವಿಜ್ಞಾನಿಗಳನ್ನು ಉತ್ಪಾದಿಸಲು ಸಾಧ್ಯವಾಗಿಲ್ಲ. ಎಡಬಿಡಂಗಿ ಶಿಕ್ಷಣ ನೀತಿಗಳು ಮತ್ತು ಸಂಶೋಧನೆಗೆ ಪ್ರಾಮುಖ್ಯತೆ ನೀಡುವಲ್ಲಿನ ವೈಫಲ್ಯತೆ ಇದಕ್ಕೆ ಕಾರಣವಾಗಿದೆ. ಶಿಕ್ಷಣದಲ್ಲಿ ಕಡಿಮೆ ಹೂಡಿಕೆಯಂತಹ ಪ್ರವೃತ್ತಿಯನ್ನು ಹಿಮ್ಮೆಟ್ಟಿಸಲು ಖಾಸಗಿ ವಲಯವೂ ಬಹಳ ಪ್ರಯತ್ನ ಮಾಡಿದೆ’ ಎಂದು ಅಪ್ಪಾಜಿ ಅಭಿಪ್ರಾಯಪಟ್ಟಿದ್ದರು. ಅವರ ದೂರದೃಷ್ಟಿಯಂತೆ ಇಂದು ಶರಣಬಸವ ವಿಶ್ವವಿದ್ಯಾಲಯವು ಶೈಕ್ಷಣಿಕ ಉತ್ಕೃಷ್ಟತೆಯನ್ನು ಸಾಧಿಸುವ ನಿಟ್ಟಿನಲ್ಲಿ ದಿಟ್ಟ ಹೆಜ್ಜೆಗಳನ್ನು ಹಾಕುತ್ತಿದೆ.

ಅಪ್ಪಾಜಿ ಸಂಸ್ಥಾನದ ಪೀಠಾಧಿಪತಿಯಾಗಿ ಮತ್ತು ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿರುವ ಈ 40 ವರ್ಷಗಳನ್ನು ಶಿಕ್ಷಣ ಕ್ಷೇತ್ರದಲ್ಲಿ ‘ಸುವರ್ಣ ಯುಗ’ ಎಂದೇ ಪರಿಗಣಿಸಲಾಗುತ್ತಿದೆ. ಮಹಿಳೆಯರ ಶೈಕ್ಷಣಿಕ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಿ, ಉತ್ತರ ಕರ್ನಾಟಕದಲ್ಲಿ ಮಹಿಳೆಯರಿಗೆ ಮೊದಲ ವಿಶೇಷ ಎಂಜಿನಿಯರಿಂಗ್ ಕಾಲೇಜು ಮತ್ತು ಕರ್ನಾಟಕದಲ್ಲಿಯೇ ಎರಡನೇ ಕಾಲೇಜು ಪ್ರಾರಂಭಿಸಿದ ಕೀರ್ತಿಗೆ ಅಪ್ಪಾಜಿ ಪಾತ್ರರಾಗಿದ್ದಾರೆ.

ಶರಣಬಸವ ವಿಶ್ವವಿದ್ಯಾಲಯ ಸೇರಿ ಸಂಘದಿಂದ ನಡೆಸುವ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಉದ್ಯೋಗದ ಮಾರ್ಗಗಳನ್ನು ತೆರೆಯುವಲ್ಲಿ ವಿಶೇಷ ಒತ್ತು ನೀಡಿದ್ದಾರೆ. ಸಂಘವು ನಡೆಸುವ ಶಿಕ್ಷಣ ಸಂಸ್ಥೆಗಳ ಒಟ್ಟು ಉದ್ಯೋಗಿಗಳಲ್ಲಿ ಮಹಿಳೆಯರೇ ಪುರುಷರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣದಲ್ಲಿ ಎಂಜಿನಿಯರಿಂಗ್ ಕಾಲೇಜು ಸ್ಥಾಪಿಸಿದ ಮೊದಲಿಗರು ಹಾಗೂ ಯಾದಗಿರಿ, ಬೀದರ್ ಮತ್ತು ಕಲಬುರಗಿ ಜಿಲ್ಲೆಗಳ ಗ್ರಾಮೀಣ ಪ್ರದೇಶಗಳಲ್ಲಿ ಪದವಿ ಕಾಲೇಜುಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳ ಸರಪಳಿಯನ್ನು ಪ್ರಾರಂಭಿಸಿದ ಕೀರ್ತಿ ಅಪ್ಪಾಜಿ ಅವರಿಗೆ ಸಲ್ಲುತ್ತದೆ.

ನವೆಂಬರ್ ತಿಂಗಳು ಶರಣಬಸವೇಶ್ವರ ಸಂಸ್ಥಾನದ ಭಕ್ತರು, ಸಂಘ ಮತ್ತು ಶರಣಬಸವ ವಿಶ್ವವಿದ್ಯಾಲಯದಿಂದ ನಡೆಸುವ ಎಲ್ಲಾ ಶಿಕ್ಷಣ ಸಂಸ್ಥೆಗಳ ಬೋಧಕ, ಬೋಧಕೇತರ ಮತ್ತು ವಿದ್ಯಾರ್ಥಿಗಳಿಗೆ ಪವಿತ್ರ ಮಾಸ. ಈ ಮಾಸದಲ್ಲಿ ಅಪ್ಪಾಜಿ ಅವರ ಜೊತೆಗೆ ಮಾತೋಶ್ರೀ ದಾಕ್ಷಾಯಿಣಿ ಅವ್ವ ಮತ್ತು ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿಪತಿ ಚಿರಂಜೀವಿ ದೊಡ್ಡಪ್ಪ ಅಪ್ಪ ಕೂಡ ಜನಿಸಿದ್ದಾರೆ. ದಾಕ್ಷಾಯಿಣಿ ಅವ್ವ ಅವರು ನವೆಂಬರ್ 22ರಂದು 55ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಾರೆ. ಸಂಸ್ಥಾನದ 9ನೇ ಪೀಠಾಧಿಪತಿ ದೊಡ್ಡಪ್ಪ ಅಪ್ಪ ನವೆಂಬರ್ 1ರಂದು ಜನಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.