ಚಿಂಚೋಳಿ (ಕಲಬುರಗಿ ಜಿಲ್ಲೆ): ತಾಲ್ಲೂಕಿನ ಸುಲೇಪೇಟದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ತಗುಲಿ ದಿನಸಿ ಮತ್ತು ಜನರಲ್ ಸ್ಟೋರ್ ಅಂಗಡಿ ಭಸ್ಮವಾಗಿದೆ.

ಜೆಡಿಎಸ್ ಮುಖಂಡ ಸಿದ್ದಯ್ಯ ಸ್ವಾಮಿ ಕಪೂರ ಪಸ್ತಪುರ ಅವರಿಗೆ ಸೇರಿ್ ಅಂಗಡಿ ಭಸ್ಮವಾಗಿದೆ. ಅಂದಾಜು ₹6 ಲಕ್ಷ ಹಾನಿ ಸಂಭವಿಸಿದೆ. ರಾತ್ರಿ ಅಂಗಡಿ ಮುಚ್ಚಿಕೊಂಡು ಮನೆಗೆ ಹೋದ ಸಿದ್ದಯ್ಯ ಸ್ವಾಮಿ, ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಅಂಗಡಿಯಿಂದ ಹೊಗೆ ಬರುತ್ತಿರುವ ಬಗ್ಗೆ ಸ್ಥಳೀಯರು ತಿಳಿಸಿದ್ದಾರೆ.

ಸಿದ್ದಯ್ಯ ಅವರು ಅಂಗಡಿಗೆ ಬಂದು ನೋಡುವಷ್ಟರಲ್ಲಿ ನೆರೆ ಹೊರೆಯವರು ಬಂದು ಅಗ್ನಿ ನಂದಿಸಲು ಯತ್ನಿಸಿದ್ದರೂ ಬೆಂಕಿಯ ಕೆನ್ನಾಲಿಗೆ ನಿಯಂತ್ರಣಕ್ಕೆ ಬರಲಿಲ್ಲ. ಕೊನೆಗೆ ಅಗ್ನಿಶಾಮಕ ಠಾಣೆ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಲು ಕೈಜೋಡಿಸಿದ್ದಾರೆ. ಘಟನಾ ಸ್ಥಳಕ್ಕೆ ಸಬ್ ಇನ್ಸ್ಪೆಕ್ಟರ್ ಅಮರ ಕುಲಕರ್ಣಿ, ಸರ್ಕಲ ಇನ್ಸ್ಪೆಕ್ಟರ್ ರಾಘವೇಂದ್ರ ಹಾಗೂ ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಶನಿವಾರ ಭೇಟಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.