ಕಲಬುರಗಿ: ‘ಚರಂಡಿ, ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದ ಬಗ್ಗೆ ಮಾಹಿತಿ ಹಕ್ಕು ಅಡಿಯಲ್ಲಿ ಮಾಹಿತಿ ಕೇಳಿದ್ದಕ್ಕೆ ಅರ್ಜಿಯನ್ನು ಹಿಂಪಡೆಯುವಂತೆ ಇಲ್ಲಸಲ್ಲದ ಆರೋಪ ಮಾಡಿ ನನ್ನ ವಿರುದ್ಧ ಪಿಡಿಒ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು ನರೋಣಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ’ ಎಂದು ಕೆಆರ್ಎಸ್ ಪಕ್ಷದ ತಾಲ್ಲೂಕು ಅಧ್ಯಕ್ಷ ಸಿದ್ಧಾರ್ಥ ಮೀಸೆ ಆರೋಪಿಸಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಮಲಾಪುರ ತಾಲ್ಲೂಕಿನ ವಿ.ಕೆ. ಸಲಗರ ಗ್ರಾಮ ಪಂಚಾಯಿತಿಯಲ್ಲಿ ವಿವಿಧ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿದೆ. ಮಾಹಿತಿ ಹಕ್ಕಿನಡಿ ಮಾಹಿತಿ ಕೇಳಲಾಗಿತ್ತು. ಅದಕ್ಕೆ ಸಭೆ ನಡೆದಾಗ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ, ಹಲ್ಲೆ ಮಾಡಿದ್ದೇನೆ ಎಂದು ದೂರು ದಾಖಲಿಸಿದ್ದಾರೆ. ಆ ಸಮಯದಲ್ಲಿ ನಾನು ಫೇಸ್ಬುಕ್ ಲೈವ್ ಮಾಡುತ್ತಿದ್ದೆ’ ಎಂದರು.

‘ಅಧಿಕಾರ ದುರಪಯೋಗ ಮಾಡಿಕೊಂಡ ಅಧಿಕಾರಿಗಳನ್ನು ತನಿಖೆಗೆ ಒಳಪಡಿಸಬೇಕು. ಗ್ರಾಮ ಪಂಚಾಯಿತಿ ಅಧ್ಯಕ್ಷರ ಸದಸ್ಯತ್ವ ರದ್ದುಪಡಿಸಬೇಕು. ಭ್ರಷ್ಟಾಚಾರ ಮಾಡಿದ ಪಿಡಿಒ ಹಾಗೂ ಇತರ ಸಿಬ್ಬಂದಿ ವಜಾ ಮಾಡಬೇಕು. ಭ್ರಷ್ಟಾಚಾರ ಕುರಿತು ಸಮಗ್ರ ತನಿಖೆಯಾಗಬೇಕು’ ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶಿವರಾಜ ಡೋಣೂರ, ರಾಜಕುಮಾರ್ ಗುತ್ತೇದಾರ, ಶಿವಪುತ್ರ ಗರೂರ, ಅಶೋಕ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.