ಕಲಬುರಗಿ: ಜಿಲ್ಲೆಯ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಭಾನುವಾರ ವಿದ್ಯಾರ್ಥಿಗಳ ಮಧ್ಯೆ ಗಲಾಟೆ ನಡೆದಿದ್ದು, ವಿಶ್ವನಾಥ ಮತ್ತು ನರೇಂದ್ರ ಎಂಬ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

‘ವಿಶ್ವವಿದ್ಯಾಲಯದ ಆವರಣದಲ್ಲಿರುವ ಲಕ್ಷ್ಮಿ ಮಂದಿರದಲ್ಲಿ ನಾವು ರಾಮನವಮಿ ಅಂಗವಾಗಿ ವಿಶೇಷ ಪೂಜೆ ಸಲ್ಲಿಸಿದ್ದೆವು. ಈ ಕಾರಣಕ್ಕಾಗಿಯೇ ಎಡಪಂಥೀಯ ವಿಚಾರಧಾರೆಯ ನಾಲ್ವರು ವಿದ್ಯಾರ್ಥಿಗಳು ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ’ ಎಂದು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ವಿದ್ಯಾರ್ಥಿ ವಿಶ್ವನಾಥ ಆರೋಪಿಸಿದ್ದಾರೆ.

‘ಎಬಿವಿಪಿ ಮತ್ತು ಆರ್ಎಸ್ಎಸ್ ಚಟುವಟಿಕೆಯನ್ನು ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಸಬಾರದು ಎಂದು ಇವರು ಈ ಮೊದಲಿನಿಂದಲೂ ನಮಗೆ ಬೆದರಿಕೆ ಹಾಕುತ್ತಿದ್ದರು. ನಾವು ರಾಮನವಮಿ ಆಚರಿಸಿದ ಕಾರಣಕ್ಕಾಗಿಯೇ ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ‘ ಎಂದು ಅವರು ದೂರಿದ್ದಾರೆ.

‘ಆಂಧ್ರಪ್ರದೇಶದ ಸಾಧಿಕ್ ಎಂಬಿಎ ಓದುತ್ತಿದ್ದು, ರಾಹುಲ್ ಪಿಎಚ್.ಡಿ ಸಂಶೋಧನಾ ವಿದ್ಯಾರ್ಥಿಯಾಗಿದ್ದಾರೆ. ಇವರನ್ನು ಕಾಲೇಜಿನಿಂದ ವಜಾಗೊಳಿಸಬೇಕು‘ ಎಂದು ಅವರು ಒತ್ತಾಯಿಸಿದ್ದಾರೆ.

‘ವಿದ್ಯಾರ್ಥಿಗಳ ಮಧ್ಯೆ ಗಲಾಟೆ ನಡೆದಿದೆ. ಸಾಧಿಕ್, ರಾಹುಲ್, ರಾಹುಲ್ ಆರ್ಯ ಸೇರಿ ಒಟ್ಟು ನಾಲ್ವರ ವಿರುದ್ಧ ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದೇವೆ‘ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.

‘ವಿಶ್ವವಿದ್ಯಾಲಯದಿಂದ ತನಿಖೆ ನಡೆಸುತ್ತಿದ್ದೇವೆ. ತನಿಖಾ ವರದಿ ಬಂದ ನಂತರ ತಪ್ಪಿತಸ್ಥ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ‘ ಎಂದು ಕುಲಪತಿ ಪ್ರೊ.ಸತ್ಯನಾರಾಯಣ ಹೇಳಿದ್ದಾರೆ.

ಜೆಎನ್ಯು ಘರ್ಷಣೆ: ಎಬಿವಿಪಿ ಸದಸ್ಯರ ವಿರುದ್ಧ ಪ್ರಕರಣ ದಾಖಲು

‘ದೆಹಲಿಯ ಜವಾಹರಲಾಲ್ ನೆಹರೂ ವಿವಿಗೆ ಮಾತ್ರ ಸೀಮಿತವಾಗಿದ್ದ ಈ ಮತಾಂಧತೆ ಕಲಬುರಗಿಗೂ ಕಾಲಿಟ್ಟಿರುವುದು ದುರಂತ. ಎಡಪಂಥೀಯ ವಿಚಾರಧಾರೆಯ ಈ ಗುಂಪುಗಳ ಚಟುವಟಿಕೆ ಹತ್ತಿಕ್ಕಬೇಕು. ತಪ್ಪಿತಸ್ಥ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ವಜಾಗೊಳಿಸಿ, ಬಂಧಿಸಬೇಕು‘ ಎಂದು ಶ್ರೀರಾಮ ಸೇನೆಯ ಅಧ್ಯಕ್ಷ ಆಂದೋಲದ ಸಿದ್ದಲಿಂಗ ಸ್ವಾಮೀಜಿ ಆಗ್ರಹಿಸಿದ್ದಾರೆ.

ರಾಮನವಮಿ, ಮಾಂಸಾಹಾರದ ವಿಚಾರವಾಗಿ ಜೆಎನ್ಯುನಲ್ಲಿ ಗುಂಪು ಘರ್ಷಣೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.