ಕಲಬುರಗಿ: ಇಲ್ಲಿನ ಐತಿಹಾಸಿಕ ಧಾರ್ಮಿಕ ಕೇಂದ್ರವಾದ ಖಾಜಾ ಬಂದಾನವಾಜ್ ದರ್ಗಾದ (ಕೆಬಿಎನ್) ಸೂಫಿ ಸಂತ ಸೈಯದ್ ಶಹಾ ಖುಸ್ರೊ ಹುಸೇನಿ (79) ಅವರು ಬುಧವಾರ ನಿಧನರಾದರು.

ಅವರಿಗೆ ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರು ಇದ್ದಾರೆ.

ಖಾಜಾ ಬಂದಾನವಾಜ್ ವಿಶ್ವವಿದ್ಯಾಲಯದ ಸಂಸ್ಥಾಪಕರಾಗಿದ್ದ ಅವರು, ಮುಂದೆ ಅದರ ಕುಲಪತಿಯೂ ಆದರು. ಖಾಜಾ ಎಜುಕೇಷನ್ ಸೊಸೈಟಿಯ ಅಧ್ಯಕ್ಷರಾಗಿದ್ದರು. ಕರ್ನಾಟಕ ರಾಜ್ಯೋತ್ಸವ ಸೇರಿ ಇತರ ಪ್ರಶಸ್ತಿಗಳಿಗೂ ಭಾಜನರಾಗಿದ್ದರು. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

1972ರಿಂದಲೇ ಕೆಬಿಎನ್ ಶಿಕ್ಷಣ ಸಂಸ್ಥೆಯೊಂದಿಗೆ ನಂಟು ಹೊಂದಿದ್ದ ಸೈಯದ್ ಶಹಾ ಖುಸ್ರೊ ಹುಸೇನಿ ಅವರು ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಶಿಕ್ಷಣಕ್ಕೆ ಮಹತ್ವದ ಕೊಡುಗೆಗಳನ್ನು ನೀಡಿದ್ದಾರೆ. ವೈದ್ಯಕೀಯ, ಎಂಜಿನಿಯರಿಂಗ್, ಬಿ.ಇಡಿ ಕಾಲೇಜುಗಳನ್ನು ಪ್ರಾರಂಭಿಸಿದ್ದಾರೆ. ಮಹಿಳೆಯರಿಗಾಗಿ ಪ್ರೌಢಶಾಲೆ, ಪದವಿಪೂರ್ವ, ಪದವಿ ಹಾಗೂ ಅರೇಬಿಕ್ ಭಾಷೆಯ ಕಾಲೇಜುಗಳನ್ನು ತೆರೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.