ಶನಿವಾರ, 7 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಲಬುರಗಿ | ಆಶಾ ಕಾರ್ಯಕರ್ತೆಯರ ಕಾರ್ಯಕ್ಕೆ ಮೆಚ್ಚುಗೆ

Published 25 ಮೇ 2023, 5:38 IST
Last Updated 25 ಮೇ 2023, 5:38 IST
ಅಕ್ಷರ ಗಾತ್ರ

ಕಲಬುರಗಿ: ‘ಬೆಳವಣಿಗೆ ಕುಂಠಿತ ಮಕ್ಕಳನ್ನು ಸಾಮಾನ್ಯ ಮಕ್ಕಳಂತೆ ಪಾಲನೆ ಮಾಡುವುದು ತುಂಬಾ ಅವಶ್ಯಕವಾಗಿದೆ. ಅಂತಹ ಮಕ್ಕಳನ್ನು ಗುರುತಿಸಿ ಅವರಿಗೆ ಸೂಕ್ತವಾದ ಚಟುವಟಿಕೆಗಳನ್ನು ಮಾಡಿಸುವುದರಿಂದ ಮಕ್ಕಳಲ್ಲಿರುವಂತಹ ನ್ಯೂನ್ಯತೆಯ ಪ್ರಮಾಣ ಕಡಿಮೆ ಮಾಡಬಹುದು. ಈ ನಿಟ್ಟಿನಲ್ಲಿ ಆಶಾ ಕಾರ್ಯಕರ್ತೆಯರ ಕಾರ್ಯ ಶ್ಲಾಘನೀಯ’ ಎಂದು ಸೇವಾ ಸಂಗಮ ಸಂಸ್ಥೆಯ ಶೀಘ್ರ ಪತ್ತೆ ಹಚ್ಚುವಿಕೆ ಮತ್ತು ಆರಂಭಿಕ ಶಿಕ್ಷಣ ಕಾರ್ಯಕ್ರಮದ ಯೋಜನಾ ನಿರ್ವಹಣಾಧಿಕಾರಿ ಸದಾನಂದ ತಿಳಿಸಿದರು.

ನಗರದ ಸೇವಾ ಸಂಗಮ ಸಮಾಜ ಸೇವಾ ಸಂಸ್ಥೆ ಸಭಾಂಗಣದಲ್ಲಿ ಅಜೀಂ ಪ್ರೇಮಜಿ ಫೌಂಡೇಷನ್ ಸಹಯೋಗದಲ್ಲಿ ಶೀಘ್ರ ಪತ್ತೆ ಹಚ್ಚುವಿಕೆ ಮತ್ತು ಆರಂಭಿಕ ಶಿಕ್ಷಣ ಕಾರ್ಯಕ್ರಮದ ಅಡಿಯಲ್ಲಿ ಆಶಾ ಕಾರ್ಯಕರ್ತೆಯರಿಗೆ ಮತ್ತು ಪಿ.ಎಚ್.ಸಿ.ಒ ಅವರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಖಾಜಾ ಹುಸೇನ ಮಾತನಾಡಿ, ಗರ್ಭಿಣಿಯರು ಉತ್ತಮ ಪೌಷ್ಟಿಕ ಆಹಾರ ಸೇವಿಸಬೇಕು. ಸಮಯಕ್ಕೆ ಸರಿಯಾಗಿ ಆರೋಗ್ಯ ತಪಾಸಣೆಯ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಬೆಳವಣಿಗೆಯಲ್ಲಿ ಕುಂಠಿತವಿರುವ ಮಕ್ಕಳನ್ನು ಸಾಮಾನ್ಯರಂತೆ ಕಾಣಬೇಕು. ಸಭೆ ಸಮಾರಂಭದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಿಕೊಡಬೇಕು. ಸಮಾಜದಲ್ಲಿ ಒಳ್ಳೆಯ ಗೌರವ ದೊರೆಯುವ ಹಾಗೆ ಮಾಡಬೇಕು ಎಂದರು.

ಬ್ರದರ್ ಮ್ಯಾಥು, ಎಲ್.ಎಚ್.ವಿ ಮೇಲ್ವಿಚಾರಕಿಯಾದ ನಿರ್ಮಲಾದೇವಿ, ಶೋಭಾ ಭಾಗವಹಿಸಿದ್ದರು. ಕಲಬುರಗಿ ನಗರ ಮತ್ತು ಗ್ರಾಮೀಣ ಭಾಗದ 65 ಕಾರ್ಯಕರ್ತೆಯರು ಮತ್ತು ಪಿ.ಎಚ್.ಸಿ.ಒ ಭಾಗವಹಿಸಿದ್ದರು. ಸೇವಾ ಸಂಗಮ ಸಂಸ್ಥೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದರು. ಜಗದೇವಿ ಸ್ವಾಗತಿಸಿ, ಲಕ್ಷ್ಮಿ ವಂದಿಸಿ, ಶಿವಕಾಂತ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT