ವಾಡಿ: ಪಟ್ಟಣ ಹೊರವಲಯದ ಬಲರಾಮ ಚೌಕ್ ಹತ್ತಿರದ ನಿಜಾಮ್ ಗೇಟ್ನ ರಾಷ್ಟ್ರೀಯ ಹೆದ್ದಾರಿ ಮೇಲೆ ಹಾದು ಹೋಗಿರುವ ರೈಲು ಮಾರ್ಗದ ದುರಸ್ತಿ ಹಿನ್ನೆಲೆಯಲ್ಲಿ ಇಂದಿನಿಂದ 2 ದಿನಗಳ ಕಾಲ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಲಾಗಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಮಧ್ಯ ರೈಲ್ವೆ ಶಹಾಬಾದ್ ಹಿರಿಯ ಅಭಿಯಂತರ ಸಲೀಂ ಆಹ್ಮದ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಯಾದಗಿರಿ- ಕಲಬುರಗಿ ರಾಷ್ಟ್ರೀಯ ಹೆದ್ದಾರಿ ಪ್ರಮುಖ ರಸ್ತೆ ಇದಾಗಿದ್ದು, ನಿತ್ಯ ಸಾವಿರಾರು ವಾಹನಗಳು ಈ ರಸ್ತೆ ಮೂಲಕ ಸಂಚರಿಸುತ್ತವೆ.

ಜು.13 ಗುರುವಾರ ಹಾಗೂ 14ರ ಶುಕ್ರವಾರ ಎರಡು ದಿನಗಳ ಕಾಲ ಸಂಚಾರವನ್ನು ಸಂಪೂರ್ಣ ನಿಷೇಧಿಸಲಾಗಿದೆ. ವಾಡಿ-ಸೂಲಹಳ್ಳಿ ವ್ಯಾಪ್ತಿಯ ಎಲ್ಲಾ ಸ್ಥಳೀಯ ಆಡಳಿತ ಸಂಸ್ಥೆಗಳು ಇದಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದ್ದು ವಾಹನ ಸವಾರರು ಬೇರೆ ಮಾರ್ಗದ ಮೂಲಕ ಸಂಚರಿಸುವಂತೆ ಪ್ರಕಟಣೆ ಮೂಲಕ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.