ಸೇಡಂ(ಕಲಬುರಗಿ ಜಿಲ್ಲೆ): ಸೇಡಂ ತಾಲ್ಲೂಕಿನ ಹೂಡಾ(ಬಿ) ಗ್ರಾಮದಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದ್ದು, ಬಾಲಕಿ ಮೃತಪಟ್ಟಿದ್ದಾಳೆ.

ಗ್ರಾಮದ ಮಮತಾ ಹಣಮಂತ ಜೋಗುರ (5) ಮೃತಪಟ್ಟಿದ್ದಾಳೆ. ಗ್ರಾಮದಲ್ಲಿ ಪೂರೈಕೆಯಾಗುವ ಕಲುಷಿತ ನೀರು ಕುಡಿದು ಬಾಲಕಿ ಮೃತಪಟ್ಟಿದ್ದಾಳೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

‘ಆಸ್ಪತ್ರೆಗೆ ದಾಖಲಾಗುವ ಮುನ್ನವೇ ಬಾಲಕಿ ಮೃತಪಟ್ಟಿದ್ದಾಳೆ. ಹೀಗಾಗಿ ಸಾವಿಗೆ ನಿಖರವಾದ ಕಾರಣ ಹೇಳಲು ಸಾಧ್ಯವಿಲ್ಲ’ ಎಂದು ವೈದ್ಯರು ಪ್ರತಿಕ್ರಿಯಿಸಿದ್ದಾರೆ.

ಗ್ರಾಮಸ್ಥರಲ್ಲಿ ಬುಧವಾರ ನಸುಕಿನ ಜಾವ ಕರುಳು ಬೇನೆ ಸೇರಿ ವಾಂತಿ– ಭೇದಿ ಕಾಣಿಸಿಕೊಂಡಿದೆ. ಮಳಖೇಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ತೆರಳಿ ಪ್ರಾಥಮಿಕ ಚಿಕಿತ್ಸೆ ಪಡೆದಿದ್ದಾರೆ. ಮಕ್ಕಳನ್ನು ಸೇಡಂನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಲಾಗಿದೆ. ಮಳಖೇಡ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಲಕ್ಷ್ಮೀಬಾಯಿ ಬಸಣ್ಣ ಜಮಾದರ ಸೇರಿ 7 ಜನ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.