ಕಲಬುರಗಿ: ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರದ ಕ್ಯಾಂಪಸ್‌ನಲ್ಲಿ ಶುಕ್ರವಾರ ಪರಿಶಿಷ್ಟ ಸಮುದಾಯದ 74 ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ಗಳನ್ನು ಕೇಂದ್ರದ ನಿರ್ದೇಶಕ ಪ್ರೊ. ಬಸವರಾಜ ಗಾದ್ಗೆ ವಿತರಿಸಿದರು.

ನಂತರ ಮಾತನಾಡಿದ ಪ್ರೊ. ಗಾದ್ಗೆ, ‘ಈ ಭಾಗದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ 74 ವಿದ್ಯಾರ್ಥಿಗಳಿಗೆ ಕಲಿಕೆಗೆ ಅನುಕೂಲವಾಗುವಂತೆ ಮತ್ತು ಕಲಿಕಾ ಪದ್ದತಿಯಲ್ಲಿ ಆಗಿರುವ ಬದಲಾವಣೆಗಳನ್ನು ಗಮನಿಸಿ ಈ ನಿರ್ಧಾರವನ್ನು ವಿಟಿಯು ತೆಗೆದುಕೊಂಡಿದೆ. ಇದರ ಸದ್ಬಳಕೆ ಮಾಡಿಕೊಂಡು ವಿದ್ಯಾರ್ಥಿಗಳು ಉತ್ತಮವಾದ ಶಿಕ್ಷಣವನ್ನು ಪಡೆದು ಅಭಿವೃದ್ಧಿ ಹೊಂದಬೇಕು’ ಎಂದು ತಿಳಿಸಿದರು.

‘ರಾಜ್ಯದಲ್ಲಿರುವ ನಾಲ್ಕು ವಿಟಿಯು ಪ್ರಾದೇಶಿಕ ಕೇಂದ್ರಗಳ ಪೈಕಿ ಅತಿ ಹೆಚ್ಚು ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳು ಕಲಬುರಗಿ ಕೇಂದ್ರದಲ್ಲಿ ಅಧ್ಯಯನ ಮಾಡುತ್ತಿದ್ದಾರೆ. ಅವರ ಅಧ್ಯಯನಕ್ಕೆ ನೆರವಾಗಲು ಉಚಿತ ಲ್ಯಾಪ್‌ಟಾಪ್ ವಿತರಣೆ ಯೋಜನೆಯನ್ನು ಕುಲಪತಿ ಪ್ರೊ.ಎಸ್. ವಿದ್ಯಾಶಂಕರ್ ಅವರ ಮಾರ್ಗದರ್ಶನದ ಮೇರೆಗೆ ಅನುಷ್ಠಾನಗೊಳಿಸಲಾಗುತ್ತಿದೆ. 2016ರಿಂದಲೇ ವಿಟಿಯುನಲ್ಲಿ ಉಚಿತ ಲ್ಯಾಪ್‌ಟಾಪ್ ವಿತರಣೆ ಮಾಡಲಾಗುತ್ತಿದೆ. ಈ ಅವಕಾಶ ಬಳಸಿಕೊಂಡು ಹಲವು ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ಇಂದು ಹಲವು ಕಂಪನಿಗಳಲ್ಲಿ ಉನ್ನತ ಹುದ್ದೆಯಲ್ಲಿದ್ದಾರೆ’ ಎಂದರು.

ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭಿಯೋಜಕ ಪ್ರೊ. ರಾಹುಲ ಮೂಲಭಾರತಿ, ವಿಶೇಷಾಧಿಕಾರಿ (ಶೈಕ್ಷಣಿಕ ವಿಭಾಗ) ಪ್ರೊ. ಶಂಭುಲಿಂಗಪ್ಪ, ಸಂಶೋಧನೆ ಮತ್ತು ಅಭಿವೃದ್ಧಿ ವಿಶೇಷ ಅಧಿಕಾರಿ ಪ್ರೊ. ಶುಭಾಂಗಿ ಪಾಟೀಲ, ಕೌಶಲ್ಯ ಅಭಿವೃದ್ಧಿ ಅಭಿಯೋಜಕಿ ಪ್ರೊ. ಶೈಲಜಾ ಖೇಣಿ, ಸಿವಿಲ್ ಎಂಜಿನಿಯರಿಂಗ್ ವಿಭಾಗದ ಸಂಯೋಜಕ ಬ್ರಿಜಭೂಷಣ, ಬಾಬುರೆಡ್ಡಿ, ಮಹಮದ್ ಅಬ್ದುಲ್ ವಹೀದ್, ಸತೀಶ ಉಪಳಾಂವಕರ ಇತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.