ಮಡಿಕೇರಿ: ಚುನಾವಣಾ ಪ್ರಚಾರ ಭಾಷಣದಲ್ಲಿ ಪ್ರಚೋದನಾಕಾರಿಯಾಗಿ ಮಾತನಾಡಿದ ಆರೋಪದ ಮೇರೆಗೆ ಮೈಸೂರಿನ ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ವಿರುದ್ಧ ಮತ್ತೊಂದು ಪ್ರಕರಣ ಇಲ್ಲಿನ ಶ್ರೀಮಂಗಲ ಠಾಣೆಯಲ್ಲಿ ದಾಖಲಾಗಿದೆ. ಇಲ್ಲಿಗೆ ಒಟ್ಟು ಕೊಡಗು ಜಿಲ್ಲೆಯಲ್ಲಿ ಅವರ ವಿರುದ್ಧ ದಾಖಲಾದ ಪ್ರಕರಣಗಳ ಸಂಖ್ಯೆ 3ಕ್ಕೇರಿದೆ.

‘ಟಿ.ಶೆಟ್ಟಿಗೇರಿ ಗ್ರಾಮದಲ್ಲಿ ಮೇ 4ರಂದು ಬಿಜೆಪಿ ಪ್ರಚಾರ ಸಭೆಯಲ್ಲಿ ಕಾರ್ಯಪ್ಪ ಅವರು ಕೊಡವ ಮತ್ತು ಕನ್ನಡ ಭಾಷೆಯಲ್ಲಿ ಧರ್ಮ ಧರ್ಮಗಳ ನಡುವೆ ಸಾಮರಸ್ಯ ಕದಡಿ, ಶತೃತ್ವ ಉಂಟು ಮಾಡುವ ಹಾಗೂ ಸಾರ್ವಜನಿಕ ನೆಮ್ಮದಿಗೆ ಭಂಗ ಉಂಟು ಮಾಡುವ ಮಾತುಗಳನ್ನಾಡಿದ್ದಾರೆ. ಜತೆಗೆ, ಅವರ ಭಾಷಣವು ಸುಳ್ಳಿನಿಂದ ಕೂಡಿದೆ’ ಎಂದು ಆರೋಪಿಸಿ ಸ್ಥಳದಲ್ಲಿದ್ದ ಕ್ಷಿಪ್ರ ಪರಿಶೀಲನಾ ತಂಡದ ಅಧಿಕಾರಿ ಕುಮಾರಸ್ವಾಮಿ ದೂರು ನೀಡಿದ್ದಾರೆ. ತನಿಖೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಫೇಸ್‌ಬುಕ್ ಖಾತೆಯಲ್ಲಿ ಮತೀಯ ಸಂಘರ್ಷ ಉಂಟು ಮಾಡುವ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ’ ಎಂದು ಆರೋಪಿಸಿ ಏ. 26ರಂದು ಪೊನ್ನಂಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಎ.ಎಸ್.ಪೊನ್ನಣ್ಣ ವಿರುದ್ಧ ಚಾರಿತ್ರ್ಯ ನಾಶ ಮಾಡುವ ಹೇಳಿಕೆ ನೀಡಿದ್ದಾರೆ’ ಎಂದು ಆರೋಪಿಸಿ ಸಿದ್ದಾಪುರ ಠಾಣೆಯಲ್ಲಿ ಮೇ 2ರಂದು ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.