ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಡಿಕೇರಿ | ಹಾರಂಗಿಯಿಂದ ಸಾವಿರ ಕ್ಯುಸೆಕ್‌ ನೀರು ನದಿಗೆ

Published : 8 ಜುಲೈ 2024, 13:27 IST
Last Updated : 8 ಜುಲೈ 2024, 13:27 IST
ಫಾಲೋ ಮಾಡಿ
Comments

ಮಡಿಕೇರಿ: ಇಲ್ಲಿನ ಕುಶಾಲನಗರದ ಹಾರಂಗಿ ಜಲಾಶಯಕ್ಕೆ ಅಧಿಕ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಸೋಮವಾರ ಸಂಜೆ ನದಿಗೆ ನೀರನ್ನು ಹೊರಬಿಡಲಾಯಿತು.

ಜಲಾಶಯದ ಎಲ್ಲ 4 ಕ್ರೆಸ್ಟ್‌ಗೇಟ್‌ಗಳನ್ನು ತೆರೆದು ಒಂದು ಸಾವಿರ ಕ್ಯುಸೆಕ್‌ ನೀರನ್ನು ನದಿಗೆ ಹರಿಸಲಾಯಿತು. ಜಲಾಶಯ ತುಂಬಲು ಇನ್ನೂ 10 ಅಡಿಗಳು ಬಾಕಿ ಇದೆ. ನದಿ ದಂಡೆಯ ನಿವಾಸಿಗಳ ಸುರಕ್ಷತೆಯ ದೃಷ್ಟಿಯಿಂದ ಭರ್ತಿಗೂ ಮುನ್ನವೇ ನೀರನ್ನು ಹೊರಬಿಡಲಾಗುತ್ತಿದೆ.

ಈ ವೇಳೆ ಶಾಸಕ ಡಾ.ಮಂತರ್‌ಗೌಡ, ತಹಶೀಲ್ದಾರ್ ಕಿರಣ್‌ಗೌರಯ್ಯ, ಕಾಡಾ ಅಧೀಕ್ಷಕ ಎಂಜಿನಿಯರ್ ರಘುಪತಿ, ಕಾರ್ಯಪಾಲಕ ಎಂಜಿನಿಯರ್ ಪುಟ್ಟಸ್ವಾಮಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT