ಮಡಿಕೇರಿ: ಪ್ರಸಕ್ತ ಸಾಲಿನ ಆಯವ್ಯಯ ಭಾಷಣದಲ್ಲಿ ‘ಎನಿವೇರ್’ ನೋಂದಣಿ ವ್ಯವಸ್ಥೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗಿದ್ದು, ಕೊಡಗು ಜಿಲ್ಲೆಯಲ್ಲಿಯೂ ಸೆ. 2ರಿಂದ ಪ್ರಕ್ರಿಯೆಗಳು ಆರಂಭವಾಗಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಈ ವ್ಯವಸ್ಥೆಯನ್ನು ಬೆಂಗಳೂರು ನಗರ ಜಿಲ್ಲೆಯಲ್ಲಿ 2011 ರಲ್ಲಿ ತುಮಕೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮಾರ್ಚ್ 2024 ರಲ್ಲಿ ಅನುಷ್ಠಾನಗೊಳಿಸಲಾಗಿತ್ತು. ಇಲ್ಲಿ ಯಶಸ್ವಿಯಾಗಿದ್ದರಿಂದ ಕೊಡಗು ಜಿಲ್ಲೆಯ ಉಪನೋಂದಣಿ ಕಚೇರಿಗಳಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ.

ಪ್ರಸ್ತುತ ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜನ್ನು ನೋಂದಣಿ ಮಾಡಲು ಅವಕಾಶವಿದೆ. ಆದರೆ, ಎನಿವೇರ್ ನೋಂದಣಿಯಲ್ಲಿ ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದು.

ಎನಿವೇರ್ ನೋಂದಣಿ ವ್ಯವಸ್ಥೆಯು ಸಾರ್ವಜನಿಕರಿಗೆ ಹಲವು ರೀತಿಯಲ್ಲಿ ಉಪಯುಕ್ತವಾಗಿದ್ದು, ದಸ್ತಾವೇಜಿನ ನೋಂದಣಿಯಲ್ಲಿ ಪಾರದರ್ಶಕತೆ ಹೆಚ್ಚಿಸುತ್ತದೆ. ನೋಂದಣಿಯಲ್ಲಿ ವಿಳಂಬವನ್ನು ತಡೆಗಟ್ಟುತ್ತದೆ. ಸಾರ್ವಜನಿಕರು ಸಮೀಪದಲ್ಲಿರುವ ಉಪನೋಂದಣಿ ಕಚೇರಿಯಲ್ಲಿ ದಸ್ತಾವೇಜನ್ನು ನೋಂದಾಯಿಸಬಹುದು. ಸ್ಲಾಟ್ ಲಭ್ಯವಿರುವಂತಹ ಕಚೇರಿಯನ್ನು ನೋಂದಣಿಗೆ ಆಯ್ಕೆ ಮಾಡಿಕೊಳ್ಳಬಹುದು. ನೋಂದಣಿ ಪ್ರಕ್ರಿಯೆ ಸುಲಭವಾಗುವುದಲ್ಲದೆ ಸಮಯವು ಸಹ ಉಳಿಯುತ್ತದೆ. ಉಪ ನೋಂದಣಿ ಕಚೇರಿಗಳಲ್ಲಿ ಜನದಟ್ಟಣೆ ಕಡಿಮೆಯಾಗುತ್ತದೆ. ಕಚೇರಿ ಸಿಬ್ಬಂದಿಗಳ ಮೇಲೆ ಕೆಲಸದ ಒತ್ತಡ ಕಡಿಮೆಯಾಗುತ್ತದೆ ಹಾಗೂ ಕಚೇರಿಗಳಲ್ಲಿ ನೋಂದಣಿ ಕೆಲಸ ಸಮಾನವಾಗಿ ಹಂಚಿಕೆಯಾಗುತ್ತದೆ.

ಆದ್ದರಿಂದ ಸಾರ್ವಜನಿಕರು ಎನಿವೇರ್ ನೋಂದಣಿಯ ಸದುಪಯೋಗಪಡಿಸಿಕೊಂಡು ತಮಗೆ ಹತ್ತಿರದ ಅಥವಾ ನೋಂದಣಿಗೆ ಸ್ಲಾಟ್ ಲಭ್ಯವಿರುವಂತಹ ಕಚೇರಿ ಆಯ್ಕೆ ಮಾಡಿಕೊಂಡು ದಸ್ತಾವೇಜನ್ನು ನೋಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.