ಕುಶಾಲನಗರ (ಕೊಡಗು): ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ, ಅವರ ಬೆಂಬಲಿಗರು ಬೆಂಗಳೂರು ಚಲೋ ಹಮ್ಮಿಕೊಂಡಿದ್ದು, ಮಂಗಳವಾರ ಬೆಳಿಗ್ಗೆ ಕುಶಾಲನಗರದಲ್ಲಿ ಚಲೋಗೆ ಚಾಲನೆ ಸಿಕ್ಕಿತು.

‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಕೊಡಗು ಜಿಲ್ಲೆಗೆ ಪ್ರಾತಿನಿಧ್ಯ ಸಿಕ್ಕಿಲ್ಲ. ಜಿಲ್ಲೆಗೆ ಅನ್ಯಾಯವಾಗಿದೆ. ಮುಖ್ಯಮಂತ್ರಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ನಮ್ಮ ಮನವಿ ಸಲ್ಲಿಸುತ್ತೇವೆ’ ಎಂದು ಬೆಂಬಲಿಗರು ಹೇಳಿದರು.

ಕುಶಾಲನಗರ ಬೈಚನಹಳ್ಳಿ ಮಾರಿಯಮ್ಮ ದೇವಾಲಯದ ಬಳಿಯಿಂದ ಈ ಜಾಥಾ ಆರಂಭಗೊಂಡಿತು. ಕುಶಾಲನಗರ ತಾಲ್ಲೂಕಿನ ಪಕ್ಷದ ಮುಖಂಡರು, ರಂಜನ್ ಅಭಿಮಾನಿಗಳು, ಪಟ್ಟಣ ಪಂಚಾಯಿತಿ ಸದಸ್ಯರು ಕಾರುಗಳಲ್ಲಿ ಬೆಂಗಳೂರಿಗೆ ತೆರಳುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.