ವಿರಾಜಪೇಟೆ: ಮಡಿಕೇರಿ ನಗರಸಭಾ ಸದಸ್ಯ ಹಾಗೂ ಮಡಿಕೇರಿ ಕೊಡವ ಸಮಾಜದ ನಿರ್ದೇಶಕ ಕಾಳಚಂಡ ಅಪ್ಪಣ್ಣ ಅವರ ಮೇಲೆ ಹಲ್ಲೆ ನಡೆಸಿರುವುದನ್ನು ವಿರಾಜಪೇಟೆ ಕೊಡವ ಸಂಘಗಳ ಒಕ್ಕೂಟ ಖಂಡಿಸಿದೆ.

ಹಲ್ಲೆ ನಡೆಸಿರುವವರನ್ನು ರೌಡಿ ಪಟ್ಟಿಗೆ ಸೇರಿಸಿ ಜಿಲ್ಲೆಯಿಂದ ಗಡಿಪಾರು ಮಾಡಬೇಕು ಎಂದು ಕೊಡವ ಸಂಘಗಳ ಒಕ್ಕೂಟದ ಅಧ್ಯಕ್ಷ ಮೆಕೇರಿರ ರವಿ ಪೆಮ್ಮಯ್ಯ ಒತ್ತಾಯಿಸಿದರು.

ಪಟ್ಟಣದ ಪ್ರೆಸ್ ಕ್ಲಬ್‌ನಲ್ಲಿ ಗುರುವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಕಾಳಚಂಡ ಅಪ್ಪಣ್ಣ ಜನರಿಂದ ಚುನಾಯಿಸಲ್ಪಟ್ಟ ಜನಪ್ರತಿನಿಧಿ. ಜನಪ್ರತಿನಿಧಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಾಡಹಗಲೆ ನಡುರಸ್ತೆಯಲ್ಲಿ ಹಲ್ಲೆ ನಡೆಸುತ್ತಾರೆ ಎಂದರೆ ಜನಸಾಮಾನ್ಯರ ಗತಿ ಏನು? ಕ್ಯಾಂಟೀನ್ ಜಾಗದ ಸಮಸ್ಯೆಯ ಕುರಿತು ಕಾನೂನು ರೀತಿಯಲ್ಲಿ ವ್ಯವಹರಿಸಬೇಕೆ ಹೊರತು ಕಾನೂನನ್ನು ಕೈಗೆತ್ತಿಕೊಳ್ಳುವುದು ಸರಿಯಾದ ಕ್ರಮವಲ್ಲ’ ಎಂದರು.

ಒಕ್ಕೂಟದ ಸಮನ್ವಯಾಧಿಕಾರಿ ಮಾದಂಡ ಪೂವಯ್ಯ ಮಾತನಾಡಿ, ಜಿಲ್ಲೆಯ ಮೂಲ ನಿವಾಸಿಗಳ ಮೇಲೆ ನಿರಂತರ ಹಲ್ಲೆ ನಡೆಯುತ್ತಿವೆ. ಈ ಮಣ್ಣಿನ ಮಹತ್ವ ಅರಿತು ಅನ್ಯೋನ್ಯವಾಗಿ ಜೀವನ ನಡೆಸುತ್ತಿರುವಾಗ ಕಿಡಿಗೇಡಿಗಳಿಂದ ಇಂತಹ ಕೃತ್ಯ ಸಹಿಸಲು ಸಾಧ್ಯವಿಲ್ಲ. ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಇಂತಹ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮಕೈಗೊಳ್ಳಬೇಕು. ಮಡಿಕೇರಿ ಕೊಡವ ಸಮಾಜ ನಡೆಸಲು ಉದ್ದೇಶಿಸಿರುವ ಪ್ರತಿಭಟನೆಗೆ ನಮ್ಮ ಸಂಪೂರ್ಣ ಬೆಂಬಲವಿದೆ’ ಎಂದರು.

ಗೋಷ್ಠಿಯಲ್ಲಿ ಒಕ್ಕೂಟದ ಕಾರ್ಯದರ್ಶಿ ಬಾಚಿರ ಜಗದೀಶ್, ಚಿಕ್ಕಪೇಟೆ ಕೊಡವ ಸಂಘದ ಅಧ್ಯಕ್ಷ ಅಮ್ಮಣಿಚಂಡ ರವಿ ಉತ್ತಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.