ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಿಜಯೇಂದ್ರ ಪೊಲೀಸ್ ವಶ ಖಂಡಿಸಿ ಮಡಿಕೇರಿಯಲ್ಲಿ ಮಳೆಯ ನಡುವೆ ಪ್ರತಿಭಟನೆ

Published 12 ಜುಲೈ 2024, 8:30 IST
Last Updated 12 ಜುಲೈ 2024, 8:30 IST
ಅಕ್ಷರ ಗಾತ್ರ

ಮಡಿಕೇರಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ನಿವೇಶನ ಹಂಚಿಕೆ ಹಗರಣ ವಿರೋಧಿಸಿ ಪ್ರತಿಭಟನೆ ನಡೆಸಲು ಮೈಸೂರಿಗೆ ತೆರಳುತ್ತಿದ್ದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ‌ ಖಂಡಿಸಿ ಬಿಜೆಪಿ ಮುಖಂಡರು ಇಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಇಲ್ಲಿನ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಸೇರಿದ ಪ್ರತಿಭಟನಾಕಾರರು ಸುರಿಯುತ್ತಿದ್ದ ಮಳೆಯಲ್ಲಿ ಕೊಡೆ ಹಿಡಿದು ಪ್ರತಿಭಟನೆ ನಡೆಸಿದರು‌.

ಈ ವೇಳೆ ಮಾತನಾಡಿದ ಬಿಜೆಪಿ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ರವಿ ಕಾಳಪ್ಪ, ಕೊಡಗು ಜಿಲ್ಲೆಯಲ್ಲೂ ಈಚೆಗೆ ಇಂಧನ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಈಗ ಹೊರ ಜಿಲ್ಲೆಗಳಲ್ಲೂ ಪ್ರತಿಭಟನೆಯನ್ನು ಹತ್ತಿಕ್ಕಲಾಗುತ್ತಿದೆ ಎಂದು ಕಿಡಿಕಾರಿದರು.

ಬಿಜೆಪಿಯ ಹಿರಿಯ ಮುಖಂಡ ಕೆ.ಜಿ.ಬೋಪಯ್ಯ ಮಾತನಾಡಿ, ಈ ಕೂಡಲೇ ಹಗರಣಗಳ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT