ವಿರಾಜಪೇಟೆ: ‘ರಕ್ತದಾನ ಮಾಡುವುದರಿಂದ ದೇಹದಲ್ಲಿ ಹೊಸ ರಕ್ತ ಉತ್ಪತ್ತಿಯಾಗುವ ಮೂಲಕ ರಕ್ತದ ಒತ್ತಡ, ಸಕ್ಕರೆ ಹಾಗೂ ಕ್ಯಾನ್ಸರ್ನಂತಹ ಕಾಯಿಲೆ ನಿಯಂತ್ರಿಸುವ ಮೂಲಕ ಉತ್ತಮ ಜೀವನ ನಡೆಸಲು ಸಾಧ್ಯ’ ಎಂದು ಕೊಡಗು ಜಿಲ್ಲೆಯ ರಕ್ತ ನಿಧಿ ಕೇಂದ್ರದ ಡಾ.ಕರುಂಬಯ್ಯ ಅಭಿಪ್ರಾಯಪಟ್ಟರು.

ಪಟ್ಟಣದ ಪಂಜರುಪೇಟೆ ಸರ್ವೋದಯ ಶಿಕ್ಷಣ ಮಹಾವಿದ್ಯಾಲಯ ಹಾಗೂ ವಿವೇಕ ಜಾಗೃತ ಬಳಗದಿಂದ ಸರ್ವೋದಯ ವಿದ್ಯಾಲಯ ಸಭಾಂಗಣದಲ್ಲಿ ಈಚೆಗೆ ಆಯೋಜಿಸಲಾಗಿದ್ದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.

‘ರಕ್ತದಾನ ಮಾಡುವುದರಿಂದ ಹೃದಯ ಸಂಬಂಧಿತ ಕಾಯಿಲೆಗಳನ್ನು ತಡೆಯಲು ಸಾಧ್ಯ. ರೋಗಿಗಳಿಗೆ ತುರ್ತು ಸಂದರ್ಭದಲ್ಲಿ ಚಿಕಿತ್ಸೆ ನೀಡಲು ರಕ್ತದ ಅವಶ್ಯಕತೆ ಬಹಳ ಮುಖ್ಯವಾಗಿರುತ್ತದೆ’ ಎಂದರು.

ಸರ್ವೋದಯ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲೆ ಡಾ.ಎಂ.ವಾಣಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿವೇಕ ಜಾಗೃತ ಬಳಗದ ಶಶಿಕಲಾ ಬಾಸ್ಕರ್, ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ವಾಸಂತಿ, ಗ್ರಂಥಪಾಲಕ ಕೆ.ಎಸ್.ರಾಜಶೇಖರ್, ವಿಮಲ, ಶರೀನಾ, ಬೋಧಕ-ಬೋಧಕೇತರರು, ರಕ್ತನಿಧಿ ಕೇಂದ್ರದ ಕುಮಾರ್ ಉಪಸ್ಥಿತರಿದ್ದರು.

ರಕ್ತದಾನ ಶಿಬಿರ ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ನಡೆದ ಶಿಬಿರದಲ್ಲಿ 50ಕ್ಕು ಹೆಚ್ಚು ಯುವಕರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.