ಮಡಿಕೇರಿ: ‘ನಾನೂ ನಗರ ನಕ್ಸಲ್’ ಎಂದು ಹೇಳಿರುವ ಸಾಹಿತಿ ಗಿರೀಶ್ ಕಾರ್ನಾಡ ಅವರನ್ನು ಬಂಧಿಸುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಮುಖಂಡ ಅಜಿತ್ಕುಮಾರ್ ಅವರು ನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.

‘ಕಾರ್ನಾಡ ಅವರನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಬೇಕು. ಕೊಡಗು ಜಿಲ್ಲೆಯ ನಕ್ಸಲ್ ಚಟುವಟಿಕೆಯಲ್ಲೂ ಭಾಗಿಯಾಗಿರುವ ಶಂಕೆಯಿದ್ದು, ಸೂಕ್ತ ತನಿಖೆ ನಡೆಸಬೇಕು’ ಎಂದು ಆಗ್ರಹಿಸಿದ್ದಾರೆ.

‘ನಕ್ಸಲ್ ಸಂಘಟನೆಯನ್ನು ನಿಷೇಧಿಸಿದ್ದರೂ ನಾನೂ ನಕ್ಸಲ್ ಎಂದು ಹೇಳುತ್ತಿರುವುದು ಕಾನೂನು ವಿರೋಧಿ ಕೃತ್ಯ. ಗುಜರಾತ್ ಮೇವಾನಿ ಕ್ಷೇತ್ರದ ಶಾಸಕ ಜಿಗ್ನೇಶ್ ಮೇವಾನಿ, ವಿದ್ಯಾರ್ಥಿ ಮುಖಂಡ ಕನ್ಹಯ್ಯ ಕುಮಾರ್, ನಟ ಪ್ರಕಾಶ್ ರೈ, ಸ್ವಾಮಿ ಅಗ್ನಿವೇಶ್ ವಿರುದ್ಧವೂ ಕ್ರಮ ಕೈಗೊಳ್ಳಬೇಕು’ ಎಂದು ಅಜಿತ್ ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.