ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆ. 2ರಂದು ಬೆಳಿಗ್ಗೆ 11.30ಕ್ಕೆ ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲದಲ್ಲಿ ರಸ್ತೆ ಕುಸಿದಿರುವ ಪ್ರದೇಶಕ್ಕೆ ಭೇಟಿ ನೀಡಿ, ವೀಕ್ಷಣೆ ಮಾಡಲಿದ್ದಾರೆ. ಬಳಿಕ, ಮಧ್ಯಾಹ್ನ 12.45ಕ್ಕೆ ವಿರಾಜಪೇಟೆ ತಾಲ್ಲೂಕಿನ ಕೆದಮಳ್ಳೂರು ಗ್ರಾಮದ ಬಳಿ ರಸ್ತೆ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ವೀಕ್ಷಿಸಲಿದ್ದಾರೆ. ಮಧ್ಯಾಹ್ನ 1.45ಕ್ಕೆ ಸಿದ್ದಾಪುರ ಸ್ವರ್ಣಮಾಲ ಕಲ್ಯಾಣ ಮಂಟಪ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ನಂತರ, ಮಡಿಕೇರಿಯ ಸುದರ್ಶನ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ.

ಸಂಜೆ 4.30ಕ್ಕೆ ಕುಶಾಲನಗರ ತಾಲ್ಲೂಕಿನ ಮಾದಾಪಟ್ಟಣ ಗ್ರಾಮಕ್ಕೆ ತೆರಳಿ ಮನೆ ಕುಸಿದಿರುವ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಇವರೊಂದಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರೂ ಭಾಗಿಯಾಗಲಿದ್ದಾರೆ.

ಇದಕ್ಕೂ ಮುನ್ನ ಮುಖ್ಯಮಂತ್ರಿ ಅವರಿಗೆ ಆನೆಚೌಕೂರು ಗೇಟ್ ಬಳಿ ಕಾಂಗ್ರೆಸ್ ಪಕ್ಷದ ವತಿಯಿಂದ ಸ್ವಾಗತ ಕೋರಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.