ಸೋಮವಾರಪೇಟೆ: ‘ಭಾರತದಲ್ಲಿ ಉತ್ಕೃಷ್ಟ ದರ್ಜೆಯ ಕಾಫಿ ಬೆಳೆಯುತ್ತಿದ್ದಾರೆ. ಬೆಳೆಗಾರರು ನಿರ್ಲಕ್ಷ್ಯ ವಹಿಸಿದ್ದಲ್ಲಿ ಮುಂದಿನ ದಿನಗಳಲ್ಲಿ ಬೃಹತ್ ಕಂಪೆನಿಗಳು ವಿದೇಶಿ ಕಾಫಿಯನ್ನೇ ಖರೀದಿಸಲು ಸಿದ್ಧತೆ ಮಾಡಿಕೊಳ್ಳುತ್ತಿವೆ’ ಎಂದು ಭಾರತ ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ. ದಿನೇಶ್ ಎಚ್ಚರಿಸಿದರು.

ತಾಲ್ಲೂಕು ಕಾಫಿ ಬೆಳೆಗಾರರ ಸಂಘದ ಕಚೇರಿಗೆ ಶನಿವಾರ ಭೇಟಿ ನೀಡಿ ಮನವಿ ಸ್ವೀಕರಿಸಿ ನಂತರ ಅವರು ಮಾತನಾಡಿದರು.

‘ಬೆಳೆಗಾರರು ಮೊದಲು ಅಲಕ್ಷ್ಯದಿಂದ ಎದ್ದು ಹೊರಬರಬೇಕಿದೆ. ನೂತನ ತಂತ್ರಜ್ಞಾನವನ್ನು ಬಳಸಿಕೊಂಡು, ಗುಣಮಟ್ಟದ ಕಾಫಿ ಬೆಳೆದಲ್ಲಿ ಮಾತ್ರ ನಮ್ಮ ಕಾಫಿಗೆ ಮಾರುಕಟ್ಟೆ ಸಿಗುತ್ತದೆ. ಕಾಫಿ ಮಂಡಳಿಯಿಂದ ಬೆಳೆಗಾರರಿಗೆ ₹307 ಕೋಟಿಯ ಸಹಾಯಧನ ಯೋಜನೆ ಇದ್ದು, ಬೆಳೆಗಾರರು ಬಳಸಿಕೊಳ್ಳಬೇಕು. ಅರೇಬಿಕಾ ಕಾಫಿ ಬೆಳೆಗಾರರು ಮೊದಲು ಸಂಘಟಿತರಾಗಬೇಕಿದೆ. ನಂತರ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಹೋರಾಡಿದಲ್ಲಿ ಯಶಸ್ಸುಗಳಿಸಲು ಸಾಧ್ಯ’ ಎಂದರು.

‘ತಿಂಗಳ ಒಂದು ದಿನ ಸಂಘದ ಕಚೇರಿಯಲ್ಲಿ ಅರೇಬಿಕಾ ಕಾಫಿ ಬೆಳೆಗಾರರು ಸೇರಿದರೆ, ಕಾಫಿ ಮಂಡಳಿಯ ಹಿರಿಯ ಅಧಿಕಾರಿಗಳು, ವಿಜ್ಞಾನಿಗಳನ್ನು ಕರೆಸಿ ಲಾಭದಾಯಕವಾಗಿ ಕಾಫಿ ಬೆಳೆಯುವುದು, ಮಾರುಕಟ್ಟೆ ಸೇರಿದಂತೆ ಸಂಪೂರ್ಣ ಮಾಹಿತಿ ನೀಡುವ ವ್ಯವಸ್ಥೆ ಮಾಡಲಾಗುವುದು’ ಎಂದು ಹೇಳಿದರು.

ತಾಲ್ಲೂಕು ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ಮೋಹನ್ ಬೋಪಣ್ಣ ಮಾತನಾಡಿ, ‘ಜಿಲ್ಲೆಯಲ್ಲಿ ಅರೇಬಿಕಾ ಕಾಫಿ ಬೆಳೆಯುವ ಪ್ರಮುಖ ತಾಲ್ಲೂಕಾಗಿದ್ದು, ಕಾಫಿ ಕೃಷಿ ಅವನತಿಯತ್ತ ಸಾಗುತ್ತಿದೆ. ಹವಾಮಾನ ವೈಪರೀತ್ಯದಿಂದಾಗಿ ಈಗಾಗಲೇ ಹೆಚ್ಚಿನ ಅರೇಬಿಕಾ ಬೆಳೆಗಾರರು ರೊಬಸ್ಟಾ ಕಾಫಿ ಬೆಳೆಯುವತ್ತ ಸಾಗಿದ್ದಾರೆ. ಈ ನಿಟ್ಟಿನಲ್ಲಿ ಹವಾಮಾನಕ್ಕೆ ಸಾಕಷ್ಟು ಕೊಡುಗೆ ನೀಡುತ್ತಿರುವ ಅರೇಬಿಕಾ ಕಾಫಿ ಕಣ್ಮರೆಯಾಗುವುದನ್ನು ತಪ್ಪಿಸಲು ಕಾಫಿ ಮಂಡಳಿ ಮತ್ತು ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆಗೆ ಮುಂದಾಗಬೇಕು’ ಎಂದರು.

‘ಕ್ರಿಮಿನಾಶಕ, ಗೊಬ್ಬರ, ಮೈಲುತುತ್ತ ಸೇರಿದಂತೆ ಎಲ್ಲದಕ್ಕೂ ಇನ್ನೂ ಹೆಚ್ಚಿನ ಸಹಾಯಧನ ನೀಡಬೇಕು. ಪ್ರಸಕ್ತ ಸಾಲಿನಲಿ ದಾಖಲೆಯ ಮಳೆಗೆ ಕಾಫಿ ನಷ್ಟವಾಗಿದ್ದು, ಬೆಳೆಗಾರರ ಫಸಲು ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. ವಾಣಿಜ್ಯ ಬ್ಯಾಂಕ್ಗಳು ಬೆಳೆಗಾರರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಲು ಮುಂದಾಗಬೇಕು. ನೆರಳಿನಲ್ಲಿ ಅರೇಬಿಕಾ ಕಾಫಿ ಬೆಳೆಯುತ್ತಿದ್ದು, ರೋಬಸ್ಟಾ ಕಾಫಿಯನ್ನು ಬಿಸಿಲಿನಲ್ಲಿ ಬೆಳೆಯಬೇಕಿರುವುದರಿಂದ ಮರಗಳನ್ನು ಕಡಿಯಬೇಕಿದೆ. ಇದು ಹವಾಮಾನದ ಮೇಲೆ ತೀವ್ರ ಪರಿಣಾಮ ಬೀರಲಿದ್ದು, ಮುಂದಿನ ದಿನಗಳಲ್ಲಿ ಬೆಂಗಳೂರಿನವರಿಗೆ ಕುಡಿಯುವ ನೀರಿಗೂ ಸಂಚಕಾರ ಬರುತ್ತದೆ’ ಎಂದು ಎಚ್ಚರಿಸಿದರು.

ವೇದಿಕೆಯಲ್ಲಿ ಕಾಫಿ ಮಂಡಳಿ ಸದಸ್ಯ ಕಿಶೋರ್, ಹಿರಿಯ ಕಾಫಿ ಬೆಳೆಗಾರರಾದ ಎಸ್.ಜಿ. ಮೇದಪ್ಪ, ಬಿ.ಡಿ. ಮಂಜುನಾಥ್, ಲವಕುಮಾರ್ ಇದ್ದರು.

ಬೆಳೆಗಾರರು ಸಂಘಟಿತರಾಗಿ

‘ಪ್ರಪಂಚದ ಉತ್ತಮ ಗುಣಮಟ್ಟದ ಕಾಫಿಯನ್ನು ಭಾರತದಲ್ಲಿ ಬೆಳೆಯುತ್ತಿದ್ದರೂ ಈಗಾಗಲೇ ಬೃಹತ್ ಕಂಪೆನಿಗಳು ಯುವಜನರಿಗೆ ರೋಬಸ್ಟಾ ಕಾಫಿ ಕುಡಿಯುವಂತೆ ಪ್ರೇರೇಪಿಸುತ್ತಿವೆ. ಸಾಂಪ್ರದಾಯಿಕವಾಗಿ ಕಾಫಿ ಬೆಳೆಯುವ ದೇಶಗಳನ್ನು ಬಿಟ್ಟು ಚೀನಾ ಸೇರಿದಂತೆ ಸಾಕಷ್ಟು ದೇಶಗಳಲ್ಲಿ ರೋಬಸ್ಟಾ ಕಾಫಿ ಬೆಳೆಯಲಾಗುತ್ತಿದೆ. ಅದರ ನೇತೃತ್ವವನ್ನು ಪ್ರಪಂಚದ ಮೂರು ಬೃಹತ್ ಕಂಪೆನಿಗಳು ವಹಿಸಿದ್ದು ಮುಂದಿನ 50 ವರ್ಷಗಳಿಗೆ ಬೇಕಾಗುವ ಕಾಫಿಯನ್ನು ಉತ್ಪಾದಿಸಲಾಗುತ್ತಿದೆ. ಆದುದ್ದರಿಂದ ಬೆಳೆಗಾರರು ಸಂಘಟಿತರಾಗಿ ಮಾಹಿತಿ ಹಂಚಿಕೊಳ್ಳುವ ಮೂಲಕ ನಷ್ಟದಲ್ಲಿ ಸಾಗುತ್ತಿರುವ ಅರೇಬಿಕಾ ಕಾಫಿ ಕೃಷಿಯನ್ನು ಲಾಭದಾಯಕವಾಗಿ ಬೆಳೆಯಬೇಕು’ ಎಂದು ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ. ದಿನೇಶ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.